ಕನ್ನಡದ ಖ್ಯಾತ ನಟರಾದ ಮಂಡ್ಯ ರಮೇಶ್ ಹಾಗೂ ಸಾಧು ಕೋಕಿಲ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ.
ಮೈಸೂರಿನ ಸರಸ್ವತಿಪುರಂನಲ್ಲಿ ಮಸಾಜ್ ಪಾರ್ಲರ್ ನಲ್ಲಿ ಮಸಾಜ್ ಮಾಡುವಾಗ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕುರಿತ ಅರ್ಜಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.
ನ್ಯಾಯಮೂರ್ತಿ ಎಂ.ಜಿ. ಉಮಾ ನೇತೃತ್ವದ ಪೀಠ 10 ವರ್ಷಗಳ ಹಿಂದಿನ ಪ್ರಕರಣವನ್ನು ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ಅರ್ಜಿಯನ್ನು ರದ್ದುಗೊಳಿಸಿದ್ದಾರೆ.



