ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಸೋಮವಾರ ವಿಶೇಷ ನ್ಯಾಯಾಲಯ ಸುದೀರ್ಘ ವಿಚಾರಣೆ ನಂತರ 5 ಲಕ್ಷ ರೂ. ಭದ್ರತಾ ಠೇವಣಿ ಹಾಗೂ ಇಬ್ಬರು ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಎಚ್.ಡಿ. ರೇವಣ್ಣ ಅವರಿಗೆ ನ್ಯಾಯಾಲಯ ಹಲವು ಷರತ್ತುಗಳನ್ನು ವಿಧಿಸಿದ್ದು, ಸಾಕ್ಷ್ಯ ನಾಶ ಮಾಡಲು ಪ್ರಯತ್ನ ಮಾಡಬಾರದು, ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂದು ಸೂಚಿಸಿದೆ.
ಕೆಆರ್ ನಗರದಲ್ಲಿ ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಸ್ ಐಟಿ ಬಂಧನಕ್ಕೆ ಒಳಗಾಗಿದ್ದ ಎಚ್.ಡಿ. ರೇವಣ್ಣ ಕಳೆದ 5 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ದಾಖಲೆ ಪತ್ರಗಳನ್ನು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ತಲುಪಿಸಲು ತಡವಾಗುವುದರಿಂದ ಮಂಗಳವಾರ ಬೆಳಿಗ್ಗೆ ಜೈಲಿನಿಂದ ಹೊರಗೆ ಬರುವ ಸಾಧ್ಯತೆ ಇದೆ.