Thursday, May 14, 2026
Google search engine
Homeಮನರಂಜನೆಕಮಲ್ ಹಾಸನ್ ಗೆ ಬಿಗ್ ಶಾಕ್: ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಕಮಲ್ ಹಾಸನ್ ಗೆ ಬಿಗ್ ಶಾಕ್: ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಥಗ್ ಆಫ್ ಲೈಫ್ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡಸಲು ವಜಾಗೊಂಡಿದೆ.

ಕನ್ನಡ ಭಾಷಾ ವಿವಾದದ ಕುರಿತು ವಿಚಾರಣೆ ಕೈಗೆತ್ತಿಕೊಳ್ಳುವುದಿಲ್ಲ. ಈ ಸಮಸ್ಯೆಯನ್ನು ಹೈಕೋರ್ಟ್ ನಲ್ಲಿಯೇ ಬಗೆಹರಿಸಿಕೊಳ್ಳಿ ಎಂದು ಸುಪ್ರೀಂಕೋರ್ಟ್ ಕಮಲ್ ಹಾಸನ್ ಗೆ ಸೂಚಿಸಿದೆ.

ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಕಮಲ್ ಹಾಸನ್ ಹೇಳಿಕೆ ಹಿನ್ನೆಲೆಯಲ್ಲಿ ಥಗ್ ಆಫ್ ಲೈಫ್ ಚಿತ್ರ ಬಿಡುಗಡೆಗೆ ಕನ್ನಡ ವಾಣಿಜ್ಯ ಮಂಡಳಿ ಅನುಮತಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಚಿತ್ರ ಬಿಡುಗಡೆಗೆ ಅವಕಾಶ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಮನವಿ ವಿಚಾರಣೆ ಹಂತದಲ್ಲಿದೆ.

ಹೈಕೋರ್ಟ್ ಕ್ಷಮೆ ಕೋರಿದರೆ ಎಲ್ಲಾ ಸಮಸ್ಯೆ ಬಗೆಹರಿಯುತ್ತದೆ. ನೀವೆ ಹುಟ್ಟುಹಾಕಿದ ಸಮಸ್ಯೆಗೆ ನಾವು ಚಿತ್ರ ಬಿಡುಗಡೆಗೆ ಅನುಮತಿ ಯಾಕೆ ನೀಡಬೇಕು ಎಂದು ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಕಮಲ್ ಹಾಸನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಇದು ಅಸಾಧ್ಯ, ಕನ್ನಡಿಗರ ಬಳಿ ಕ್ಷಮೆ ಕೇಳಿದರೆ ಮಾತ್ರ ಸಮಸ್ಯೆಗೆ ಪರಿಹಾರ ಎಂದು ಹೇಳಿತ್ತು. ಅರ್ಜಿಯ ವಿಚಾರಣೆ ಜೂನ್ 10ಕ್ಕೆ ಮುಂದೂಡಿಕೆಯಾಗಿದೆ. ಅದಕ್ಕೂ ಮೊದಲೇ ಕಮಲ್ ಹಾಸನ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಥಗ್ ಲೈಫ್ ವಿರುದ್ಧ ಕರ್ನಾಟಕದಲ್ಲಿ ಬೆದರಿಕೆಗಳು ಬರುತ್ತಿವೆ. ಚಿತ್ರ ಪ್ರದರ್ಶನಕ್ಕೆ ಬಿಡುತ್ತಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ವಿಚಾರಣೆಗೆ ನ್ಯಾಯಮೂರ್ತಿ ಪಿಕೆ ಮಿಶ್ರಾ ನಿರಾಕರಣೆ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments