ಬರ ಹಾಗೂ ಜಲಾಶಯಗಳಲ್ಲಿ ನೀರಿನ ಕೊರತೆ ನಡುವೆಯೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನಂತೆ ಕಾವೇರಿ ನೀರನ್ನು 15 ದಿನಗಳ ಬಿಡುಗಡೆ ಮಾಡುವಂತೆ ಸೂಚಿಸಿದೆ.
ಗುರುವಾರ ಬೆಳಗ್ಗೆ ಸಭೆ ನಡೆಸಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ ಪ್ರತಿದಿನ 3 ಸಾವಿರ ಕ್ಯೂಸೆಕ್ ನಂತೆ ಒಟ್ಟು 15 ದಿನಗಳ ಕಾಲ 3.91 ಟಿಎಂಸಿ ನೀರನ್ನು ಹರಿಸುವಂತೆ ಶಿಫಾರಸು ಮಾಡಿತ್ತು. ಈ ಶಿಫಾರಸನ್ನು ಪಾಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿದೆ.
ರಾಜ್ಯದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಹಾಗೂ ಕೆಆರ್‌ಎಸ್, ಹೇಮಾವತಿ, ಹಾರಂಗಿ ಮತ್ತು ಕಬಿನಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿದಿರುವುದರಿಂದ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಮನವಿ ಮಾಡಿದ ಮನವಿಯನ್ನು ಪ್ರಾಧಿಕಾರ ಒಪ್ಪಿಗೆ ನೀಡಲಿಲ್ಲ.



