Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ದೇಶ

ಬಿಹಾರದಲ್ಲಿ ಶೇ.60.13 ಮತದಾನ: 20 ವರ್ಷದಲ್ಲೇ ಗರಿಷ್ಠ ಮತದಾನ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು
bihar election

ಭಾರೀ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭೆಗೆ ಗುರುವಾರ ನಡೆದ ಮತದಾನದಲ್ಲಿ ಶೇ.60.13ರಷ್ಟು ಮತದಾನವಾಗಿದ್ದು, ಕಳೆದ 20 ವರ್ಷಗಳಲ್ಲೇ ಗರಿಷ್ಠ ಮತದಾನದ ದಾಖಲೆ ಬರೆದಿದೆ.

ಕೇಂದ್ರ ಚುನಾವಣಾ ಆಯೋಗ ಈ ಮಾಹಿತಿ ನೀಡಿದ್ದು ಸಂಜೆ 5 ಗಂಟೆವರೆಗೆ ಬಿಹಾರದಲ್ಲಿ ಒಟ್ಟಾರೆ ಶೇ.60.13ರಷ್ಟು ಮತದಾನವಾಗಿದೆ ಎಂದು ತಿಳಿಸಿದೆ.

ಬಿಹಾರ ವಿಧಾನಸಭೆಯ 121 ಕ್ಷೇತ್ರಗಳಿಗೆ ಗುರುವಾರ ಮೊದಲ ಹಂತದ ಮತದಾನ ನಡೆದಿದೆ. ಬೆಳಿಗ್ಗೆಯಿಂದಲೇ ಚುರುಕಿನ ಮತದಾನವಾಗಿದ್ದು, ಆಡಳಿತಾರೂಢ ಜೆಡಿಯು ಮತ್ತು ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ಮತ್ತು ಆರ್ ಜೆಡಿ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ಪೈಪೋಟಿ ಏರ್ಪಟ್ಟಿದೆ.

ಆರ್‌ಜೆಡಿ ನಾಯಕ ಮತ್ತು ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ , ಸಿಎಂ ನಿತೀಶ್​ ಕುಮಾರ್​ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೇರಿದಂತೆ ಹಲವು ಹಿರಿಯ ರಾಜಕಾರಣಿಗಳು ಮತ ಚಲಾಯಿಸಿದ್ದಾರೆ.

ಹಲವು ರಾಜಕೀಯ ನಾಯಕರಿಂದ ಮತದಾನ ತೇಜಸ್ವಿ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಸೇರಿದಂತೆ ಅವರ ಕುಟುಂಬ ಸದಸ್ಯರೊಂದಿಗೆ ಪಟ್ನಾದ ಪಶುವೈದ್ಯಕೀಯ ಕಾಲೇಜಿನ ಬೂತ್‌ನಲ್ಲಿ ಮತ ಚಲಾಯಿಸಿದರು.

ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಲಖಿಸರೈನಲ್ಲಿರುವ ಆಯಾ ಬೂತ್‌ಗಳಲ್ಲಿ ಮತ ಚಲಾಯಿಸಿದರು. ಆದರೆ ವಿಜಯ್ ಕುಮಾರ್ ಸಿಂಗ್ ಮತ ಚಲಾವಣೆಗೆ ಕ್ಷೇತ್ರಕ್ಕೆ ಭೇಟಿ ನೀಡಿದಾಗ ಅವರ ಕಾರಿನ ಮೇಲೆ ಸ್ಥಳೀಯರು ಚಪ್ಪಲಿ ಹಾಗೂ ಕಲ್ಲು ತೂರಾಟ ನಡೆಸಿದ್ದಾರೆ.

ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಲಾಲನ್ ಪಾಟ್ನಾದಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಸಚಿವ ನಿತಿನ್ ನಬಿನ್ ತಮ್ಮ ಪತ್ನಿ ದೀಪ್ಮಲಾ ಶ್ರೀವಾಸ್ತವ್ ಅವರೊಂದಿಗೆ ಪಟ್ನಾದ ದಿಘಾ ವಿಧಾನಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಗಾಯಕ, ರಾಜಕಾರಣಿ, ಆರ್‌ಜೆಡಿಯ ಖೇಸರಿ ಲಾಲ್ ಯಾದವ್, ಸರನ್ ಜಿಲ್ಲೆಯ ಎಕ್ಮಾದಲ್ಲಿ ಮತ ಚಲಾಯಿಸಿದರು. ಬಿಜೆಪಿ ನಾಯಕ ಬಿಖು ಭಾಯ್ ದಲ್ಸಾನಿಯಾ ಕೂಡ ಮುಂಜಾನೆ ಮತ ಚಲಾಯಿಸಿದರು.

ಬಿಹಾರದ 18 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ಸಾಗಿದೆ. ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದ್ದು, ಕೆಲವು ಸ್ಥಳದಲ್ಲಿ ಭದ್ರತಾ ಕಾರಣದಿಂದ 5ಕ್ಕೆ ಮತದಾನ ಮುಕ್ತಾಯ ಮಾಡಲಾಗುತ್ತಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment