Friday, May 15, 2026
Google search engine
Homeಜಿಲ್ಲಾ ಸುದ್ದಿಎತ್ತಿನಗಾಡಿಗೆ ಬೈಕ್ ಡಿಕ್ಕಿ: ಜಾತ್ರೆಗೆ ಹೊರಟಿದ್ದ ಮೂವರು ಯುವಕರ ದುರ್ಮರಣ

ಎತ್ತಿನಗಾಡಿಗೆ ಬೈಕ್ ಡಿಕ್ಕಿ: ಜಾತ್ರೆಗೆ ಹೊರಟಿದ್ದ ಮೂವರು ಯುವಕರ ದುರ್ಮರಣ

ಎತ್ತಿನಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದೆ.

ಮೈಲಾರ ಜಾತ್ರೆಗೆ ಒಂದೇ ಬೈಕ್ ನಲ್ಲಿ ಹೊರಟ್ಟಿದ್ದ ಮೂವರು ರಾಣೆಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಶಶಿಕುಮಾರ್ ಉಪ್ಪಾರ (25), ಆಕಾಶ್ ಬಿರಾದಾರ (23) ಮತ್ತು ದರ್ಶನ್ (23) ಮೃತ ದುರ್ದೈವಿಗಳು.

ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ಬೈಕ್‌ನಲ್ಲಿ ಹೊರಟಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ದರ್ಶನ್ ಹಾಗೂ ಆಕಾಶ್ ಮೂರನೇ ವರ್ಷದ ಬಿಎಸ್ಸಿ ವಿದ್ಯಾರ್ಥಿಗಳಾಗಿದ್ದರೆ, ಶಶಿಕುಮಾರ್ ಹನುಮನಮಟ್ಟಿ ಹೋಟೆಲ್‌ ನಲ್ಲಿ ಕೆಲಸ ಮಾಡುತ್ತಿದ್ದ.

ತಡರಾತ್ರಿ ಎತ್ತಿನಬಂಡಿಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments