Saturday, May 16, 2026
Google search engine
Homeಜಿಲ್ಲಾ ಸುದ್ದಿರಸ್ತೆ ಬದಿ ಮಾಹಿತಿ ಬೋರ್ಡ್ ಗೆ ಬೈಕ್ ಡಿಕ್ಕಿ, ಸವಾರ ಸಾವು

ರಸ್ತೆ ಬದಿ ಮಾಹಿತಿ ಬೋರ್ಡ್ ಗೆ ಬೈಕ್ ಡಿಕ್ಕಿ, ಸವಾರ ಸಾವು

ನಿಯಂತ್ರಣ ತಪ್ಪಿ ಮಾಹಿತಿ ಬೋರ್ಡ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೌತಮಪುರ ಸಮೀಪದ ಬೈರಾಪುರ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ ಕೋಟೆಕೊಪ್ಪ ಗ್ರಾಮದ ನಿವಾಸಿ ರಮೇಶ್ (55) ಸ್ಥಳದಲ್ಲೇ ಅಸುನೀಗಿದ್ದಾರೆ.

ಮೃತ ರಮೇಶ್ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮಾಹಿತಿ ಬೋರ್ಡ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ತೀವ್ರತೆಗೆ ರಮೇಶ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ದೃಶ್ಯ ಕಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ಕೂಡಲೇ ಆನಂದಪುರ ಪೊಲೀಸ್ ಠಾಣೆಯ ಪಿಎಸೈ ಪ್ರವೀಣ್ ಎಸ್.ಪಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಪಘಾತದ ಸ್ಥಳದಲ್ಲಿ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ರಸ್ತೆ ಪಕ್ಕದ ಬೋರ್ಡ್ ಕೂಡ ಹಾನಿಗೊಳಗಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆನಂದಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments