Thursday, November 21, 2024
Google search engine
Homeತಾಜಾ ಸುದ್ದಿ3 ಪಕ್ಷೇತರ ಶಾಸಕರ ಬೆಂಬಲ ವಾಪಸ್: ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಪತನ?

3 ಪಕ್ಷೇತರ ಶಾಸಕರ ಬೆಂಬಲ ವಾಪಸ್: ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಪತನ?

ಮೂವರು ಪಕ್ಷೇತರ ಶಾಸಕರು ಹರಿಯಾಣದಲ್ಲಿ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿರುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರ್ಕಾರ ಬಹುಮತ ಕಳೆದುಕೊಂಡಿದೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೂವರು ಪಕ್ಷೇತರ ಶಾಸಕರಾದ ಸೋಂಬಿರ್ ಸಂಗ್ವನ್, ರಣಭೀರ್ ಗೋಲನ್ ಮತ್ತು ಧರ್ಮಪಾಲ್ ಗೋಂಡರ್ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು,  ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.

ರೋಹ್ಟಕ್ ನಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೂವರು ಶಾಸಕರು ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಘೋಷಿಸಿದರು.

ರೈತರ ಪರ ಧೋರಣೆ ಸೇರಿದಂತೆ ಸರ್ಕಾರದ ಧೋರಣೆ ಖಂಡಿಸಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿರುವುದಾಗಿ ಶಾಸಕರು ಹೇಳಿದ್ದಾರೆ. ಆದರೆ ಸರ್ಕಾರದಲ್ಲಿ ತಮಗೆ ಯಾವುದೇ ಸಚಿವ ಸ್ಥಾನ ನೀಡದ ಕಾರಣ ಅಸಮಾಧಾನದಿಂದ ಬೆಂಬಲ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.

ಮೂವರು ಶಾಸಕರು ಬೆಂಬಲ ವಾಪಸ್ ಪಡೆದಿದ್ದರಿಂದ ಬಿಜೆಪಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಇದೀಗ ವಿಶ್ವಾಸಮತ ಸಾಬೀತುಪಡಿಸಬೇಕಾದ ಒತ್ತಡಕ್ಕೆ ಒಳಗಾಗಿದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ನಡೆದ ಈ ಬೆಳವಣಿಗೆ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ಕಾಂಗ್ರೆಸ್ ಸರ್ಕಾರ ರಚನೆಗೆ ಯತ್ನಿಸುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments