Friday, November 22, 2024
Google search engine
Homeತಾಜಾ ಸುದ್ದಿಮೋದಿ ಹೇಳಿಕೆ ಖಂಡಿಸಿದ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖಂಡ!

ಮೋದಿ ಹೇಳಿಕೆ ಖಂಡಿಸಿದ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖಂಡ!

ಅಲ್ಪ ಸಂಖ್ಯಾತರ ಕುರಿತು ಪ್ರಧಾನಿ ಮೋದಿ ಹೇಳಿಕೆಯನ್ನು ಖಂಡಿಸಿದ್ದ ರಾಜಸ್ಥಾನ್ ನ ಬಿಕೆನಾರ್ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿ ಅವರನ್ನು ಬಿಜೆಪಿ ಅಮಾನತುಗೊಳಿಸಿದೆ.

ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಬಹಿರಂಗವಾಗಿ ಖಂಡಿಸುವ ಮೂಲಕ ಅವರ ವರ್ಚಸ್ಸನ್ನು ಕುಗ್ಗಿಸುವ ಕೆಲಸ ಮಾಡುವ ಮೂಲಕ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಬಿಜೆಪಿ ಹೇಳಿದೆ.

ಇತ್ತೀಚೆಗೆ ದೆಹಲಿಯಲ್ಲಿ ಉಸ್ಮಾನ್ ಘನಿ, ಪ್ರಧಾನಿ ಅಲ್ಪ ಸಂಖ್ಯಾತರ ವಿರುದ್ಧ ಹೇಳಿಕೆ ನೀಡಿದ್ದರಿಂದ ರಾಜಸ್ಥಾನ್ ನ 25 ಕ್ಷೇತ್ರಗಳ ಪೈಕಿ 3ರಲ್ಲಿ ಸೋಲಲಿದೆ ಎಂದು ಹೇಳಿದ್ದರು.

ಇದೇ ವೇಳೆ ಅಲ್ಪ ಸಂಖ್ಯಾತರ ಕುರಿತು ಮೋದಿ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ಮೋದಿ ಅವರ ಹೇಳಿಕೆಯಿಂದ ಮುಸ್ಲಿಮನಾಗಿ ನನಗೆ ಬೇಸರವಾಗಿದೆ. ಅಲ್ಪ ಸಂಖ್ಯಾತರ ಬಗ್ಗೆ ಇಷ್ಟು ಕೀಳು ಮಟ್ಟದಲ್ಲಿ ಅವರು ಮಾತನಾಡುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments