ಬಿಜೆಪಿ ನಾಯಕ ಪತ್ನಿ ಹಾಗೂ ಮೂವರು ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರು ಮಕ್ಕಳು ಮೃತಪಟ್ಟು, ಮತ್ತೊಬ್ಬ ಮಗ ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಸಹಾರನ್ಪುರದ ಗಂಗೋ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ನಾಯಕ ಯೋಗೇಶ್ ರೋಹಿಲ್ಲಾ ಈ ಕೃತ್ಯ ಎಸಗಿದ್ದು, ಪೊಲೀಸರು ಯೋಗೇಶ್ ನನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ.
ಪತ್ನಿ ಶೀಲ ಶಂಕಿಸಿದ್ದ ಯೋಗೇಶ್ ನಿತ್ಯ ಜಗಳವಾಡುತ್ತಿದ್ದ. ಆತ ಕೆಲವು ದಿನಗಳಿಂದ ತೀವ್ರ ಮಾನಸಿಕ ಒತ್ತಡದಲ್ಲಿದ್ದ ಎಂದೂ ಹೇಳಲಾಗಿದೆ, ನೆರೆಹೊರೆಯವರೊಂದಿಗೆ ಬೇರೆಯವರೊಂದಿಗೆ ತಮ್ಮ ಸ್ಥಿತಿ ಬಗ್ಗೆ ಹೇಳಿಕೊಂಡಿರಲಿಲ್ಲ. ವಿಧಿವಿಜ್ಞಾನ ತಂಡದ ಜೊತೆ ಪೊಲೀಸ್ ಅಧಿಕಾರಿ ಗಳು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಕೃತ್ಯ ಎಸಗಿದ ಬಳಿಕ ಆರೋಪಿ ಯೋಗೀಶ್ ಸ್ವತಃ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ, ನಿಖರ ಕಾರಣವನ್ನು ಪೊಲೀಸರು ಕಲೆ ಹಾಕುವ ಕಾರ್ಯ ಮುಂದುವರಿಸಿದ್ದಾರೆ.



