ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಆಂಧ್ರಪ್ರದೇಶಕ್ಕೆ ಪರಾರಿಯಾಗುತ್ತಿದ್ದ ವೇಳೆ ಕೋಲಾರದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ್ದಕ್ಕಾಗಿ ಎರಡು ಪ್ರಕರಣಗಳಲ್ಲಿ ಮುನಿರತ್ನ ವಿರುದ್ಧ ವಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್ ಐಆರ್ ದಾಖಲಿಸಲಾಗಿತ್ತು.
ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಮುನಿರತ್ನ ಕೋಲಾರದ ಮೂಲಕ ಆಂಧ್ರಪ್ರದೇಶಕ್ಕೆ ಪರಾರಿ ಆಗಲು ಯತ್ನಿಸಿದಾಗ ಸಿಕ್ಕಿಬಿದ್ದಿದ್ದಾರೆ.
ಶಾಸಕರ ಕಾರನ್ನು ಚೇಸ್ ಮಾಡಿದ ಪೊಲೀಸರು ಕೋಲಾರ ಬಳಿ ಕಾರನ್ನು ಅಡ್ಡಗಟ್ಟಿ ಮುನಿರತ್ನ ಅವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶಕ್ಕೆ ಪರಾರಿಯಾಗುತ್ತಿರುವ ಕುರಿತು ಮೊಬೈಲ್ ಟವರ್ ಲೊಕೇಶನ್ ಟ್ರೇಸ್ ಮಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ಸಿಟಿ ಪೊಲೀಸ್ ಕಮೀಷನರ್ ಸೂಚನೆ ಮೇರೆಗೆ ಮುನಿರತ್ನ ಅವರನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಂಧಿಸಿದ್ದು, ಅವರನ್ನು ಈಗಾಲೇ ಬೆಂಗಳೂರು ಕಡೆಗೆ ಕೊಲಾರ ಪೊಲೀಸರು ಕರೆದುಕೊಂಡು ಹೋಗುತ್ತಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಬಳಿ ಮುನಿರತ್ನ ಅವರನ್ನು ವಶಕ್ಕೆ ಪಡೆಯಲಾಗಿದೆ.ಬಂ
ಧನದ ಭೀತಿ ಎದುರಿಸುತ್ತಿದ್ದ ಶಾಸಕ ಮುನಿರತ್ನ ಅವರು ಕೋಲಾರ ಮಾರ್ಗವಾಗಿ ಆಂಧ್ರ ಪ್ರದೇಶದ ಚಿತ್ತೂರಿಗೆ ತೆರಳುತ್ತಿದ್ದರು. ಈ ವೇಳೆ ಮುನಿರತ್ನ ಅವರ ಮೇಲೆ ನಿಗಾ ವಹಿಸಿದ್ದ ಪೊಲೀಸರು, ಅವರು ಮೊಬೈಲ್ ಟವರ್ ಲೊಕೇಷನ್ ಆಧರಿಸಿ ಕೋಲಾರ ಎಸ್ಪಿ ಬಿ.ನಿಖಿಲ್ ಸಮ್ಮುಖದಲ್ಲಿ, ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಸದ್ಯ ಕೋಲಾರ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿರುವ ಪೊಲೀಸರು. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾಗಿದೆ.