Thursday, September 24, 2026
Google search engine
Homeರಾಜಕೀಯ2500 ಮತದಾರರು ಡಿಲಿಟ್ ಗೆ ಬಿಜೆಪಿ ಶಾಸಕ ಪತ್ರ: ಬಿಕೆ ಹರಿಪ್ರಸಾದ್ ಬಾಂಬ್

2500 ಮತದಾರರು ಡಿಲಿಟ್ ಗೆ ಬಿಜೆಪಿ ಶಾಸಕ ಪತ್ರ: ಬಿಕೆ ಹರಿಪ್ರಸಾದ್ ಬಾಂಬ್

ಬೆಂಗಳೂರು: ಸಾವಿರಾರು ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ದಾಖಲೆಗಳನ್ನು ಬಿಡುಗಡೆ ಮಾಡಿದ ಹರಿಪ್ರಸಾದ್, ಶಾಸಕ ಅಭಯ್ ಪಾಟೀಲ್ ಅವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅಭಯ್ ಪಾಟೀಲ್ ಅವರು ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಸುಮಾರು 2,500 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವಂತೆ ಮನವಿ ಮಾಡಲಾಗಿದೆ. ಈ ಮತದಾರರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದು, ಅವರನ್ನು ಪಾಕಿಸ್ತಾನ ಮತ್ತು ಬಾಂಗ್ಲಾದೇಶದವರು ಎಂದು ಬಿಂಬಿಸಿ ಪಟ್ಟಿಯಿಂದ ತೆಗೆದುಹಾಕಲು ಪ್ರಯತ್ನಿಸಲಾಗಿದೆ ಎಂದು ಹರಿಪ್ರಸಾದ್ ಆರೋಪಿಸಿದರು.

ಶಾಸಕರು ಬರೆದ ಪತ್ರಕ್ಕೆ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದಲೇ ಉತ್ತರ ಬಂದಿದ್ದು, ಈ ರೀತಿಯಾಗಿ ಸಾಮೂಹಿಕವಾಗಿ ಮತದಾರರ ಹೆಸರುಗಳನ್ನು ಅಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಅವರು ಹೇಳಿದರು.

ಬೆಳಗಾವಿಯ ಒಂದೇ ಒಂದು ಮತಗಟ್ಟೆಯಲ್ಲಿ 50 ಮತದಾರರ ಹೆಸರುಗಳನ್ನು ಅಳಿಸಲು ಪತ್ರ ನೀಡಲಾಗಿದೆ. ಅಲ್ಲದೆ, ಸುಮಾರು 7,000 ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಅವುಗಳಲ್ಲಿ ಒಂದಕ್ಕೂ ಅರ್ಜಿದಾರರ ಸಹಿ ಇಲ್ಲ ಎಂದು ಹರಿಪ್ರಸಾದ್ ಆರೋಪಿಸಿದರು.

“ಮತದಾರರ ಪಟ್ಟಿ ಪರಿಷ್ಕರಣೆ ನಿಯಮಗಳ ಪ್ರಕಾರ ಕಾನೂನುಬಾಹಿರವಾಗಿ ಹಸ್ತಕ್ಷೇಪ ಮಾಡಿ ಬೋಗಸ್ ಡಿಲೀಷನ್ ಫಾರ್ಮ್‌ಗಳನ್ನು ಸಲ್ಲಿಸುವುದು ಶಿಕ್ಷಾರ್ಹ ಅಪರಾಧ. ಶಾಸಕ ಅಭಯ್ ಪಾಟೀಲ್ ಸಲ್ಲಿಸಿರುವ ಅಧಿಕೃತ ಪತ್ರದ ಪ್ರತಿ ನಮ್ಮ ಬಳಿ ಇದೆ. ಈ ಪ್ರಕರಣದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳೂ ಶಾಮೀಲಾಗಿರುವ ಶಂಕೆ ಇದೆ. ಈ ಬಗ್ಗೆಯೂ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು,” ಎಂದು ಅವರು ಒತ್ತಾಯಿಸಿದರು.

ಶಾಸಕ ಅಭಯ್ ಪಾಟೀಲ್ ವಿರುದ್ಧ ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ಸಲ್ಲಿಸಲಾಗುವುದು ಎಂದು ಹರಿಪ್ರಸಾದ್ ತಿಳಿಸಿದರು. ಅಲ್ಪಸಂಖ್ಯಾತರ ಮತಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಪ್ರಯತ್ನಿಸಲಾಗಿದೆ ಎಂಬ ಆರೋಪದ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದು ಅವರು ಆಗ್ರಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments