Thursday, August 13, 2026
Google search engine
Homeದೇಶಕೊನೆಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ: ಜೆಪಿ ನಡ್ಡಾ ಜಾಗ ತುಂಬಲಿರುವ ನಿತಿನ್‌ ನಬಿನ್‌ ಯಾರು...

ಕೊನೆಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ: ಜೆಪಿ ನಡ್ಡಾ ಜಾಗ ತುಂಬಲಿರುವ ನಿತಿನ್‌ ನಬಿನ್‌ ಯಾರು ಗೊತ್ತಾ?

ದೀರ್ಘ ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರನ್ನು ನೇಮಕ ಮಾಡಲಾಗಿದ್ದು, ಜೆಪಿ ನಡ್ಡಾ ಅವರಿಂದ ತೆರವಾದ ಸ್ಥಾನ ತುಂಬಲಿರುವ ನಿತಿನ್‌ ನಬಿನ್‌ ಜನವರಿ 20ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಅಧ್ಯಕ್ಷರ ಚುನಾವಣೆಗೆ ನಾಮ ನಿರ್ದೇಶನಗಳು ಜನವರಿ 19 ರಂದು ನಡೆಯಲಿದ್ದು, ಮರುದಿನ ಚುನಾವಣೆ ನಡೆಯಲಿದೆ. ಅದೇ ದಿನ ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ಮೋದಿ, ಮುಖ್ಯಮಂತ್ರಿಗಳು, ರಾಷ್ಟ್ರೀಯ ಪದಾಧಿಕಾರಿಗಳು, ರಾಜ್ಯಾಧ್ಯಕ್ಷರು ಮತ್ತು ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸದಸ್ಯರು ಸೇರಿದಂತೆ ಇತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

45 ವರ್ಷದ ನಬಿನ್‌ ಬಿಹಾರದ ಪಾಟ್ನಾ ಜಿಲ್ಲೆಯ ಬಂಕಿಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಡಿಸೆಂಬರ್ 15 ರಂದು ನಬಿನ್‌ ಅವರನ್ನು ಬಿಜೆಪಿ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಇದೀಗ ಬಿಹಾರ ಮತ್ತು ಪೂರ್ವ ಭಾರತದಿಂದ ಆಯ್ಕೆಯಾದ ಮೊದಲ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಇವರಾಗಿದ್ದಾರೆ

ಭವಿಷ್ಯದಲ್ಲಿ ಯುವ ನಾಯಕರಿಗೆ ಮಹತ್ವದ ಜವಾಬ್ದಾರಿ ನೀಡುವ ಬಿಜೆಪಿಯ ಕಾರ್ಯತಂತ್ರದ ಭಾಗವಾಗಿ ಈ ಹುದ್ದೆಯನ್ನು ನೀಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ. ಬಿಜೆಪಿಯೊಳಗೆ ನಬಿನ್ ಜೊತೆ ನಿಕಟವಾಗಿ ಕೆಲಸ ಮಾಡಿದವರು ಅವರನ್ನು ಕಠಿಣ ಪರಿಶ್ರಮಿ, ಉತ್ಸಾಹಿ ರಾಜಕಾರಣಿ ಎಂದು ಬಣ್ಣಿಸಿದ್ದಾರೆ.

ಜನಸಂಘದ ಮಾಜಿ ಸದಸ್ಯ ಹಾಗೂ ಶಾಸಕ ದಿವಂಗತ ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಅವರ ಪುತ್ರರಾಗಿರುವ ನಬಿನ್‌ ಸುಮಾರು 2 ದಶಕಗಳ ರಾಜಕೀಯ ಅನುಭವ ಹೊಂದಿದ್ದಾರೆ. ನಬಿನ್‌ 5 ಬಾರಿ ಬಂಕಿಪುರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದು, ಸಚಿವರಾಗಿ ಹಲವು ಖಾತೆಗಳನ್ನು ನಿರ್ವಹಿಸಿದ್ದಾರೆ. .

ಛತ್ತೀಸ್‌ಗಢದ ಉಸ್ತುವಾರಿಯಾಗಿದ್ದ ನಬಿನ್‌ ಅಲ್ಲಿ ಪಕ್ಷವನ್ನು ಆಡಳಿತಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇವರ ಕೆಲಸವನ್ನು ಗುರುತಿಸಿದ ಬಳಿಕ ಇವರಿಗೆ ದೆಹಲಿ ಚುನಾವಣೆಯ ಪ್ರಚಾರದಲ್ಲಿ ಪ್ರಮುಖ ಪಾತ್ರ ನೀಡಲಾಗಿತ್ತು.

ನಿತಿನ್ ನಬಿನ್ ಬಿಹಾರದ ಕಾಯಸ್ಥ ಸಮುದಾಯದಿಂದ ಬಂದಿದ್ದಾರೆ. ಬಿಹಾರದಲ್ಲಿ ಕಾಯಸ್ಥ ಮೇಲ್ವರ್ಗದ ಜಾತಿ ಎಂದು ಪರಿಗಣಿಸಿದರೂ ಇತರ ಜಾತಿಗಳ ಜೊತೆ ಸಂಘರ್ಷದಲ್ಲಿ ಇಲ್ಲ. ಬಿಹಾರ ಚುನಾವಣಾ ಸಮಯದಲ್ಲಿ ಗೃಹ ಸಚಿವ ಅಮಿತ್‌ ಶಾ ನಿತಿನ್ ಮನೆಗೆ ಭೇಟಿ ನೀಡಿ ಅವರ ಸಂಘಟನಾ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಿಹಾರ ಚುನಾವಣೆಗೆ ಮೊದಲು ಜೀವಿಕಾ ದೀದಿ ಜಾಲವನ್ನು ಸಜ್ಜುಗೊಳಿಸುವ ಜವಾಬ್ದಾರಿಯನ್ನು ನಬಿನ್ ಅವರಿಗೆ ವಹಿಸಲಾಗಿತ್ತು. ಬಿಹಾರ ಮೈತ್ರಿಕೂಟ ಒಗ್ಗಟ್ಟನ್ನು ಪ್ರದರ್ಶಿಸುವ ಪ್ರಮುಖ ಎನ್‌ಎಡಿಎಎ ಸಮನ್ವಯ ಸಭೆಗಳಲ್ಲಿಯೂ ನಿತಿನ್ ಭಾಗಿಯಾಗುತ್ತಿದ್ದರು.

ಛತ್ತೀಸ್‌ಗಢ ಪ್ರಚಾರದ ಸಮಯದಲ್ಲಿ ನಬಿನ್ ಅವರ ಸಂಘಟನಾ ಕೌಶಲ್ಯ ಹೈಕಮಾಂಡ್‌ ಗಮನಕ್ಕೆ ಬಂದಿತ್ತು. ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಚುನಾವಣಾ ಸಹ-ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. ಚುನಾವಣೆಗೆ ಕನಿಷ್ಠ ಒಂದೂವರೆ ವರ್ಷಕ್ಕೆ ಮೊದಲು ನಬಿನ್ ವಾರದಲ್ಲಿ ಕನಿಷ್ಠ ನಾಲ್ಕು ದಿನ ಛತ್ತೀಸ್‌ಗಢಗೆ ಬರುತ್ತಿದ್ದರು. ಇದು ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ವಿರುದ್ಧ ಬಿಜೆಪಿಯ ಪ್ರಚಾರಕ್ಕೆ ಭದ್ರವಾದ ಅಡಿಪಾಯ ಹಾಕಿತ್ತು.

ಕಾರ್ಯಾಧ್ಯಕ್ಷನಾಗುತ್ತೇನೆ ಎನ್ನುವುದು ಸ್ವತಃ ನಿತಿನ್ ನಬಿನ್ ಅವರಿಗೆ ತಿಳಿದಿರಲಿಲ್ಲ. ಬಿಹಾರದಲ್ಲಿ ಪಕ್ಷ ಅಧಿಕಾರಕ್ಕೆ ಏರಲು ಕಾರಣರಾದ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ನಿತಿನ್‌ ಡಿ.14 ರಂದು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಇರುವಾಗಲೇ ನಿತಿನ್ ನಬಿನ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ಘೋಷಿಸಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments