Sunday, 8 November 2026 — Kannadavahini
BREAKING NEWS
ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ
ರಾಜಕೀಯ

ವಿಧಾನಪರಿಷತ್ ಗೆ ಬಿಜೆಪಿಯ 3, ಜೆಡಿಎಸ್ 1 ಅಭ್ಯರ್ಥಿ ಆಯ್ಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 12 ವೀಕ್ಷಣೆಗಳು
bjp candidates

ಬೆಂಗಳೂರು: ವಿಧಾನಪರಿಷತ್ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ.

ನಾಲ್ಕು ಸೀಟುಗಳ ಪೈಕಿ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್​​ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ ಮೂರು ಈಶಾನ್ಯ ಶಿಕ್ಷಕರ ಕ್ಷೇತ್ರ, ಪೂರ್ವ ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಇನ್ನುಳಿದ 1 ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಟ್ಟಿದೆ. ಇದರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಹಾಗೂ ಬಿಜೆಪಿ ವಿಧಾನ ಪರಿಷತ್ ಚುನಾವಣೆಗೂ ತಮ್ಮ ಮೈತ್ರಿಯನ್ನು ಮುಂದುವರೆಸಿದೆ.

ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಸುಶೀಲ್ ನಮೋಶಿ, ಪೂರ್ವ ಪದವೀಧರ ಕ್ಷೇತ್ರಕ್ಕೆ ಎಸ್.ವಿ ಸಂಕನೂರ್ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಟಿಕೆಟ್ ಕೆ.ಎಂ.ಸುರೇಶ್ ಅವರಿಗೆ ನೀಡಲಾಗಿದೆ. ಇನ್ನುಳಿದ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಟ್ಟಿದ್ದು, ಜೆಡಿಎಸ್ ಯಾರನ್ನು ಕಣಕ್ಕಿಳಿಸಲಿದೆ ಎನ್ನುವುದೇ ಕುತೂಹಲ ಮೂಡಿಸಿದೆ.

ಒಟ್ಟು ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್ ಎರಡಕ್ಕೆ ಬೇಡಿಕೆ ಇಟ್ಟಿತ್ತು. ಬೆಂಗಳೂರು ಶಿಕ್ಷಕರ ಮತ್ತು ಆಗ್ನೇಯ ಪದವೀಧರ ಪದವೀಧರ ಕ್ಷೇತ್ರಗಳನ್ನು ಜೆಡಿಎಸ್ ಕೇಳಿತ್ತು. ಆದರೆ ಆಗ್ನೇಯ ಪದವೀಧರ ಕ್ಷೇತ್ರವನ್ನು ಬಿಜೆಪಿಯ ಚಿದಾನಂದಗೌಡ ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ಬಿಜೆಪಿ ಬಿಟ್ಟುಕೊಟ್ಟಿಲ್ಲ. ಇನ್ನು ಕಾಂಗ್ರೆಸ್‌ನ ಪುಟ್ಟಣ್ಣ ಇರುವ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟು ಕೊಡಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳು:

ಕಾಂಗ್ರೆಸ್ ಈಗಾಗಲೇ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಮರು ಸ್ಪರ್ಧೆ ಮಾಡಲಿದ್ದಾರೆ. ಪಶ್ಚಿಮ ಪದವೀಧರರ ಕ್ಷೇತ್ರದಿಂದ ಮೋಹನ್ ಲಿಂಬಿಕೈ, ಆಗ್ನೇಯ ಪದವೀಧರರ ಕ್ಷೇತ್ರದಿಂದ ಶಶಿ ಹುಲಿಕುಂಟೆಮಠ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದ ಟಿಕೆಟ್ ಶರಣಪ್ಪ ಮಟ್ಟೂರ್ ಅವರಿಗೆ ನೀಡಲಾಗಿದೆ.

2020ರಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗಳು ನಡೆದವು. ಎರಡು ಪದವೀಧರರ ಕ್ಷೇತ್ರಗಳಿಂದ ಎಸ್ ವಿ ಸಂಕನೂರು ಮತ್ತು ಚಿದಾನಂದ್ ಗೌಡ ಆಯ್ಕೆಯಾದ್ದರು.

ಎರಡು ಶಿಕ್ಷಕರ ಕ್ಷೇತ್ರಗಳಿಂದ ಶಶಿಲ್ ನಮೋಶಿ ಮತ್ತು ಪುಟ್ಟಣ್ಣ ಆಯ್ಕೆಯಾದ್ದರು. ನಾಲ್ವರೂ ಬಿಜೆಪಿಯವರಾಗಿದ್ದರು. ಆದರೆ ಪುಟ್ಟಣ್ಣ ಕೇಸರಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿದ್ದರು. ನಂತರ, ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅದೇ ಕ್ಷೇತ್ರದಿಂದ ಮರು ಆಯ್ಕೆಯಾದರು. ಇವರೆಲ್ಲರ ಅವಧಿಗಳು 2026ರ ನವೆಂಬರ್ 11 ರಂದು ಕೊನೆಗೊಳ್ಳುತ್ತವೆ. ಆದ್ರೆ, ಅವಧಿ ಮುಗಿಯುವ ಒಂದು ತಿಂಗಳ ಮೊದಲು ಚುನಾವಣೆಗಳನ್ನು ನಡೆಸಬೇಕು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8407 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment