18ನೇ ಲೋಕಸಭಾ ಸ್ಪೀಕರ್ ಆಗಿ ಬಿಜೆಪಿ ನಾಯಕ ಒಡಿಶಾ ಮೂಲದ ಬಾತೃಹರಿ ಮಹತಾಬ್ ಆಯ್ಕೆಯಾಗಿದ್ದಾರೆ.
ಲೋಕಸಭಾ ಚುನಾವಣೆ ಹಾಗೂ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ನವೀನ್ ಪಟ್ನಾಯಕ್ ನೇತೃತ್ವದ ಸರ್ಕಾರ ಪತನಗೊಳಿಸಲು ಪ್ರಮುಖ ಪಾತ್ರವನ್ನು ಭಾತೃಹರಿ ಮಹತಾಬ್ ವಹಿಸಿದ್ದರು.
ಕಟಕ್ ನಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಭಾತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ಈಶಾನ್ಯ ರಾಜ್ಯಗಳತ್ತ ಬಿಜೆಪಿ ಹೆಚ್ಚು ಗಮನ ಹರಿಸಿದೆ ಎಂದು ಹೇಳಲಾಗಿದೆ.
ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ಎಕ್ಸ್ ನಲ್ಲಿ ಭಾತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಮಾಡುವ ಪ್ರಸ್ತಾಪಕ್ಕೆ ರಾಷ್ಟ್ರಪತಿ ದ್ರೌಪದಿ ಮರ್ಮು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
ಭಾತೃಹರಿ ಮಹತಾಬ್ ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿರುವುದಕ್ಕೆ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದ್ದು, ಸಂಸದೀಯ ಸಚಿವರಾಗಿ ಕಿರಣ್ ರಿಜಿಜು ಮೊದಲ ತಪ್ಪು ಮಾಡಿದ್ದಾರೆ ಎಂದು ಹೇಳಿಕೆ ನೀಡಿದೆ. ಕಾಂಗ್ರೆಸ್ ಸ್ಪೀಕರ್ ಸ್ಥಾನಕ್ಕೆ ಕೆ.ಸುರೇಶ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.
ಇದೇ ವೇಳೆ ಸ್ಪೀಕರ್ ಸ್ಥಾನಕ್ಕೆ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಬೇಡಿಕೆ ಸಲ್ಲಿಸಿತ್ತು. ಬಿಜೆಪಿ ಸಭೆಯಲ್ಲಿ ಆಂಧ್ರಪ್ರದೇಶದ ಪುರುಂದೇಶ್ವರಿ ಮತ್ತು ಬಿಜೆಪಿಯ ಭಾತೃಹರಿ ಹೆಸರು ಪ್ರಸ್ತಾಪವಾಗಿದ್ದು, ಅಂತಿಮವಾಗಿ ಬಿಜೆಪಿ ಸ್ಪೀಕರ್ ಸ್ಥಾನವನ್ನು ತನ್ನಲ್ಲೇ ಉಳಿಸಿಕೊಂಡಿದೆ. ಇದರಿಂದ ಬಿಜೆಪಿಯ ನಿಗೂಢ ನಡೆ ಅಚ್ಚರಿ ಮೂಡಿಸಿದೆ.