Tuesday, June 30, 2026
Google search engine
Homeವಿದೇಶಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ ಪಿ ಜಯಭೇರಿ, ತಾರಿಕ್‌ ರೆಹಮಾನ್‌ ನೂತನ ಪ್ರಧಾನಿ?

ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ ಪಿ ಜಯಭೇರಿ, ತಾರಿಕ್‌ ರೆಹಮಾನ್‌ ನೂತನ ಪ್ರಧಾನಿ?

ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಜಯಭೇರಿ ಬಾರಿಸಿ ಬಹುಮತದ ಗೆಲುವು ಸಾಧಿಸಿದೆ. ಇದರಿಂದ ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಪುತ್ರ ತಾರಿಖ್ ರೆಹಮಾನ್ ಪ್ರಧಾನಿ ಪಟ್ಟಕ್ಕೇರುವುದು ಖಚಿತವಾಗಿದೆ.

ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ‌299 ಸಂಸತ್ ಸ್ಥಾನಗಳಿಗೆ ನಡೆದ ಮತದಾನದಲ್ಲಿ ಬಿಎನ್‌ಪಿ 212 ಸ್ಥಾನಗಳಲ್ಲಿ ಗೆಲುವು ಕಂಡಿದೆ. 2024ರ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಆಡಳಿತ ಪತನಗೊಂಡಿತ್ತು. ನಂತರ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು.

‘ವಿದ್ಯಾರ್ಥಿ ದಂಗೆ’ಯ ಬಳಿಕ ಪದಚ್ಯುತಗೊಂಡ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷ ಈ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಲಾಗಿತ್ತು. ಹೀಗಾಗಿ, ಬಿಎನ್‌ಪಿ ಮತ್ತು ಅದರ ಹಿಂದಿನ ಮಿತ್ರ ಪಕ್ಷ ಜಮಾತ್-ಇ-ಇಸ್ಲಾಮಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ಆದರೆ, ಜಮಾತ್-ಇ-ಇಸ್ಲಾಮಿ ಕೇವಲ ಸ್ಥಾನಗಳಲ್ಲಿ ಗೆಲ್ಲಲಷ್ಟೇ ಶಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ. ಇನ್ನುಳಿದಂತೆ ಸ್ವತಂತ್ರ ಅಭ್ಯರ್ಥಿಗಳು ಮತ್ತು ಇತರೆ ಪಕ್ಷಗಳು 6 ಸ್ಥಾನಗಳನ್ನು ಗೆದ್ದಿವೆ ಎಂದು ವರದಿಯಾಗಿದೆ.

ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಪಕ್ಷದ ಅಧ್ಯಕ್ಷೆ ಮತ್ತು ಮಾಜಿ ಪ್ರಧಾನಿ ದಿ.ಖಲೀದಾ ಜಿಯಾ ಅವರ ಮಗ ತಾರಿಕ್ ರೆಹಮಾನ್ ಬಾಂಗ್ಲಾದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಬಿಎನ್‌ಪಿ ಈ ಹಿಂದೆ ಘೋಷಣೆ ಮಾಡಿತ್ತು. ಮೂರನೇ ಎರಡರಷ್ಟು ಸ್ಥಾನ ಗೆಲ್ಲುವುದರೊಂದಿಗೆ ಸರ್ಕಾರ ರಚಿಸುವ ವಿಶ್ವಾಸ ನಮಗಿದೆ ಎಂದು ಬಿಎನ್‌ಪಿಯ ಕೇಂದ್ರ ಚುನಾವಣಾ ಸಮಿತಿ ವಕ್ತಾರ ಮಹ್ದಿ ಅಮೀನ್ ಇಂದು ಮುಂಜಾನೆ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.

17 ವರ್ಷಗಳ ಸ್ವಯಂ ಗಡೀಪಾರಿನ ನಂತರ ಕಳೆದ ವರ್ಷದ ಡಿಸೆಂಬರ್‌ನಲ್ಲಿ ತಾರಿಖ್ ರೆಹಮಾನ್ ಬಾಂಗ್ಲಾದೇಶಕ್ಕೆ ಮರಳಿದ್ದರು. ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಕಳೆದ 18 ತಿಂಗಳುಗಳಿಂದ ಆಡಳಿತ ನಡೆಸುತ್ತಿದೆ.

ದೇಶದಲ್ಲಿ ಮಿತಿ ಮೀರಿದ ಭ್ರಷ್ಟಾಚಾರ, ಅಲ್ಪಸಂಖ್ಯಾತರ ಮೇಲೆ ನಿರಂತರ ದಾಳಿ, ದೌರ್ಜನ್ಯಗಳು, ಹತ್ಯೆಗಳು, ಹಣದುಬ್ಬರ, ನಿರುದ್ಯೋಗ ಮತ್ತು ಆರ್ಥಿಕ ಅಭಿವೃದ್ಧಿಯಂಥ ಅನೇಕ ಸಮಸ್ಯೆಗಳು ಈ ಚುನಾವಣೆಯನ್ನು ನಿರ್ಧರಿಸುವ ಪ್ರಮುಖ ವಿಚಾರಗಳಾಗಿದ್ದವು. ಇದರ ನಡುವೆ, ಈ ಚುನಾವಣೆ ಸಂಪೂರ್ಣ ನ್ಯಾಯಯುತ ಮತ್ತು ಪಾರದರ್ಶಕವಾಗಿ ನಡೆಯುವುದೇ ಎಂಬ ಅನುಮಾನವೂ ವ್ಯಕ್ತವಾಗಿತ್ತು.

ಪ್ರಧಾನಿ ಮೋದಿ ಅಭಿನಂದನೆ: ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಿಎನ್‌ಪಿಯನ್ನು ನಿರ್ಣಾಯಕ ಗೆಲುವಿನತ್ತ ಕೊಂಡೊಯ್ದ ತಾರಿಕ್ ರೆಹಮಾನ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಈ ಗೆಲುವು ಬಾಂಗ್ಲಾ ಜನರು ನಿಮ್ಮ ನಾಯಕತ್ವದ ಮೇಲಿಟ್ಟಿರುವ ನಂಬಿಕೆಯನ್ನು ತೋರಿಸುತ್ತಿದೆ. ಭಾರತ ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಬೆಂಬಲವಾಗಿ ನಿಲ್ಲುವುದನ್ನು ಮುಂದುವರಿಸುತ್ತದೆ. ನಮ್ಮ ಸಂಬಂಧಗಳನ್ನು ಬಲಪಡಿಸಲು ಹಾಗು ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments