Sunday, October 18, 2026
Google search engine
Homeದೇಶಗುಂಡಿನ ದಾಳಿಯಲ್ಲಿ ಬಾಲಿವುಡ್ ನಟ ಟೈಗರ್ ಶ್ರಾಫ್ ಪಾರು

ಗುಂಡಿನ ದಾಳಿಯಲ್ಲಿ ಬಾಲಿವುಡ್ ನಟ ಟೈಗರ್ ಶ್ರಾಫ್ ಪಾರು

ಬಾಲಿವುಡ್ ಹಿರಿಯ ನಟ ಜಾಕಿ ಶ್ರಾಫ್ ಅವರ ಪುತ್ರ ಹಾಗೂ ಖ್ಯಾತ ನಟ ಟೈಗರ್ ಶ್ರಾಫ್ ಗುಂಡಿನ ದಾಳಿಯಲ್ಲಿ ಪಾರಾದ ಘಟನೆ ಭಾನುವಾರ ಸಂಜೆ ನಡೆದಿದೆ.

ಮುಂಬೈನ ಜುಹು ಬಳಿಯ ಅವರ ನಿವಾಸದ ಬಳಿ ಸಂಜೆ 7.30ರ ಸುಮಾರಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸುಮಾರು 3ರಿಂದ 4 ಸುತ್ತು ಗುಂಡು ಹಾರಿಸಿದ್ದಾರೆ.

ಫುಟ್ಬಾಲ್ ಆಟವಾಡಿ ಟೈಗರ್ ಶ್ರಾಫ್ ಮನೆಗೆ ಮರಳುತ್ತಿದ್ದಾಗ ಈ ದಾಳಿ ನಡೆದಿದ್ದು, ದಾಳಿಯ ವೇಳೆ ಇದ್ದ ಆಟೋ ಚಾಲಕರು ಸೇರಿದಂತೆ ಮೂವರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಮಿಷನರ್ ಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಪೊಲೀಸರ 15 ತಂಡಗಳನ್ನು ರಚಿಸಲಾಗಿದ್ದು, ತನಿಖೆ ಚುರುಕುಗೊಳಿಸಲಾಗಿದೆ.

ದಾಳಿಯ ಹೊಣೆಯನ್ನು ಬಿಷ್ನೋಯಿ ಗ್ಯಾಂಗ್ ಹೊಣೆ ಹೊತ್ತಿದ್ದು, ನಟ ಸಲ್ಮಾನ್ ಖಾನ್ ಜೊತೆ ಯಾರೇ ಕೆಲಸ ಮಾಡಿದರೂ ಅವರನ್ನು ಬಿಡುವುದಿಲ್ಲ. ಟೈಗರ್ ಶ್ರಾಫ್ ಅವರಿಗೆ ಈಗಾಗಲೇ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ ನಂತರವೂ ಅವರು ಎಚ್ಚೆತ್ತುಕೊಳ್ಳಲಿಲ್ಲ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments