Thursday, November 21, 2024
Google search engine
Homeತಾಜಾ ಸುದ್ದಿBREAKING ಕೇಂದ್ರ ನೀತಿ ಆಯೋಗದ ಸಭೆ ಬಹಿಷ್ಕರಿಸಿದ ರಾಜ್ಯ ಸರ್ಕಾರ!

BREAKING ಕೇಂದ್ರ ನೀತಿ ಆಯೋಗದ ಸಭೆ ಬಹಿಷ್ಕರಿಸಿದ ರಾಜ್ಯ ಸರ್ಕಾರ!

ಕರ್ನಾಟಕ ರಾಜ್ಯದ ಮೇಲಿನ ತಾರತಮ್ಯ ಖಂಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ರಾಜ್ಯ ಸರ್ಕಾರ ಬಹಿಷ್ಕರಿಸಿದೆ.

ನರೇಂದ್ರ ಮೋದಿ ಸತತ ಮೂರನೇ ಬಾರಿ ಪ್ರಧಾನಮಂತ್ರಿ ಪದವಿ ಅಲಂಕರಿಸಿದ ನಂತರ ಜುಲೈ 27ರಂದು ಕರೆಯಲಾಗಿರುವ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಪ್ರಕಟಿಸಿದ ಬಜೆಟ್ ನಲ್ಲಿ ಕರ್ನಾಟಕವನ್ನು ಕಡೆಗಣಿಸಿರುವ ಹಿನ್ನೆಲೆಯಲ್ಲಿ ಕೇಂದ್ರದ ತಾರತಮ್ಯ ನೀತಿಯನ್ನು ಖಂಡಿಸಿ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವುದಾಗಿ ಸಿದ್ದರಾಮಯ್ಯ ಎಕ್ಸ್ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕವನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುವ ಮೂಲಕ ಕೇಂದ್ರ ತಾರತಮ್ಯ ನೀತಿ ಅನುಸರಿಸುತ್ತಿದೆ. ಇದನ್ನು ಖಂಡಿಸಿ ನೀತಿ ಆಯೋಗ ಸಭೆಯಲ್ಲಿ ಪಾಲ್ಗೊಳ್ಳದೇ ಇರಲು ನಿರ್ಧರಿಸಿದ್ದಾಗಿ ಸಿದ್ದರಾಮಯ್ಯ ವಿವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments