Sunday, November 24, 2024
Google search engine
HomeಕಾನೂನುBreaking ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ದಾಖಲಿಸಲು ಕೋರ್ಟ್ ಆದೇಶ

Breaking ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ದಾಖಲಿಸಲು ಕೋರ್ಟ್ ಆದೇಶ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬೆಂಗಳೂರು ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ ಆದೇಶ ಮಾದರಿಯಲ್ಲೇ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ತನಿಖೆ ನಡೆಸಲು ನ್ಯಾಯಾಲಯ ಆದೇಶಿಸಿದೆ.

ಬೆದರಿಕೆ ಹಾಕಿ ಚುನಾವಣಾ ಬಾಂಡ್ ವಸೂಲು ಮಾಡಲಾಗಿದೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ ನ ಆದರ್ಶ್ ಅಯ್ಯರ್ ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಎಫ್ ಐಆರ್ ದಾಖಲಸಿ ತನಿಖೆ ನಡೆಸುವಂತೆ ತಿಲಕನಗರ ಪೊಲೀಸರಿಗೆ ಸೂಚನೆ ನೀಡಿದೆ.

ಅಕ್ಟೋಬರ್ 10ಕ್ಕೆ ವಿಚಾರಣೆ ಮುಂದೂಡಲಾಗಿದೆ. ಇದರಿಂದ ನಿರ್ಮಲಾ ಸೀತಾರಾಮನ್ ಸಂಕಷ್ಟಕ್ಕೆ ಸಿಲುಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments