ಮುಡಾ ಅಕ್ರಮ ಸೈಟ್ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಕೆಜೆ ಅಬ್ರಾಹಂ ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಮೂಲಕ ರಾಜ್ಯಪಾಲರು ಸಚಿವ ಸಂಪುಟ ನಿರ್ಣಯವನ್ನು ತಿರಸ್ಕರಿಸಿದ್ದಾರೆ.
ಆರ್ ಟಿಐ ಕಾರ್ಯಕರ್ತ ಕೆಜೆ ಅಬ್ರಾಹಂ ದೂರು ನೀಡಿದ ಕೆಲವೇ ಗಂಟೆಗಳಲ್ಲಿ ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ರಾಜ್ಯ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿತ್ತು. ಅಲ್ಲದೇ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೋಟಿಸ್ ವಿರುದ್ಧ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಮನವಿ ಮಾಡಿತ್ತು.
ಇದೆಲ್ಲದರ ನಡುವೆಯೂ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟಾಗಿದ್ದು, ಸಿದ್ದರಾಮಯ್ಯ ಮುಂದಿನ ನಡೆ ಕುತೂಹಲ ಮೂಡಿಸಿದೆ.