ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ `ಜನ್ ಸುರಾಜ್ ಪಾರ್ಟಿ’ ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ.
ರಾಷ್ಟ್ರೀಯ ಪಕ್ಷಗಳ ಚುನಾವಣ ತಂತ್ರಗಾರಿಕೆ ರೂಪಿಸಿ ಯಶಸ್ವಿಯಾಗಿದ್ದ ಪ್ರಶಾಂತ್ ಕಿಶೋರ್ ಹೊಸ ಪಕ್ಷದ ಹೆಸರು ಘೋಷಣೆ ಮಾಡಿದ್ದು, ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಿಗೆ ಸ್ಪರ್ಧಿಸುವುದಾಗಿ ಘೋಷಿಸಿದೆ.
ಬಿಹಾರದಲ್ಲಿ ಕಳೆದ ಒಂದು ವರ್ಷದಿಂದ ಪ್ರಚಾರದಲ್ಲಿ ಭಾಗಿಯಾಗಿರುವ ಪ್ರಶಾಂತ್ ಕಿಶೋರ್ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದ ಪ್ರಶಾಂತ್ ಕಿಶೋರ್ ಇದೀಗ ಅಧಿಕೃತವಾಗಿ ರಾಜಕೀಯ ಪಕ್ಷದ ಹೆಸರು ಘೋಷಣೆ ಮಾಡಿದ್ದಾರೆ.