Tuesday, May 26, 2026
Google search engine
HomeರಾಜಕೀಯBREAKING NEWS: ಸಿಎಂ ಸ್ಥಾನಕ್ಕೆ ಶೀಘ್ರದಲ್ಲೇ ಸಿದ್ದರಾಮಯ್ಯ ರಾಜೀನಾಮೆ? ಡಿಕೆಶಿ ಬೆನ್ನಿಗೆ ನಿಂತ ಹೈಕಮಾಂಡ್?

BREAKING NEWS: ಸಿಎಂ ಸ್ಥಾನಕ್ಕೆ ಶೀಘ್ರದಲ್ಲೇ ಸಿದ್ದರಾಮಯ್ಯ ರಾಜೀನಾಮೆ? ಡಿಕೆಶಿ ಬೆನ್ನಿಗೆ ನಿಂತ ಹೈಕಮಾಂಡ್?

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚಿಸಿದ್ದು, ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ವಹಿಸಿಕೊಳ್ಳು ಸೂಚಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಸಿಎಂ ಸ್ಥಾನ ಬದಲಾವಣೆ ಇಲ್ಲ. ಈ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ.  ಈ ವದಂತಿ ಕೇವಲ ಮಾಧ್ಯಮಗಳಲ್ಲಿ ಅಷ್ಟೇ ಎಂದು ಕಾಂಗ್ರೆಸ್ ಮುಖಂಡು ಘೋಷಿಸಿದ್ದಾರೆ. ಆದರೆ ಉನ್ನತ ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಂದಿನ ವಾರ ರಾಜೀನಾಮೆ ನೀಡುವಂತೆ ಸೂಚಿಸಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸ್ಥಾನ ನೀಡುವ ಪ್ರಸ್ತಾಪವನ್ನು ರಾಹುಲ್ ಗಾಂಧಿ ಮುಂದಿಟ್ಟಿದ್ದಾರೆ. ಆದರೆ ರಾಷ್ಟ್ರ ರಾಜಕಾರಣಕ್ಕೆ ಬರಲು ಸಿದ್ದರಾಮಯ್ಯ ಹಿಂದೇಟು ಹಾಕಿದ್ದು ಅವರ ಮನವೊಲಿಕೆಗೆ ರಾಹುಲ್ ಸಾಕಷ್ಟು ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ರಾಜ್ಯಸಭಾ ಸ್ಥಾನ ಪಡೆಯುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಹೈಕಮಾಂಡ್ ಓಲೈಕೆಗೆ ಯತ್ನಿಸಿದೆ. ಆದರೆ ಸಿದ್ದರಾಮಯ್ಯ ಈ ಬಗ್ಗೆ ಯೋಚಿಸಲು ಎರಡು ದಿನ ಕಾಲವಕಾಶ ಕೇಳಿದ್ದಾರೆ ಎನ್ನಲಾಗಿದೆ.

ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಪ್ರಿಯಾಂಕಾ ವಾದ್ರಾ ಹಾಗೂ ಸೋನಿಯಾ ಗಾಂಧಿ ಬೆಂಬಲ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಮನಸ್ಸಿನಲ್ಲದೇ ಇದ್ದರೂ ಡಿಕೆ ಶಿವಕುಮಾರ್ ಪರ ನಿಲುವು ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಮಂಗಳವಾರ ಇಡೀ ದಿನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲಾ ನೇತೃತ್ವದಲ್ಲಿ ನಡೆದ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಾವು ಇಂದು ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗಳ ಕುರಿತು ಚರ್ಚೆ ನಡೆಸಿದ್ದು, ಅಭ್ಯರ್ಥಿ ಆಯ್ಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದ್ದೇವೆ. ಆದರೆ ಅಧಿಕಾರ ಹಂಚಿಕೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ಕೆಸಿ ವೇಣುಗೋಪಾಲ್ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಅಲ್ಲದೇ ಅಧಿಕಾರ ಹಂಚಿಕೆ ಸೇರಿದಂತೆ ಯಾವುದೇ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದು ಅವರು ಹೇಳಿದರು.

ಮಂಗಳವಾರ ಇಡೀ ದಿನ ಹಲವು ಸುತ್ತುಗಳ ಸಭೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಜೊತೆ ರಾಹುಲ್ ಸುಮಾರು 30 ನಿಮಿಷಗಳ ಕಾಲ ರಹಸ್ಯ ಸಭೆ ನಡೆಸಿದರು. ಅಲ್ಲದೇ ಅಧಿಕಾರ ಹಂಚಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದು, ಮನವೊಲಿಕೆಗೆ ಯತ್ನಿಸಿದರು. ಆದರೆ ಸಿದ್ದರಾಮಯ್ಯ ತಮ್ಮ ಪಟ್ಟು ಸಡಿಸಲಿಲ್ಲ ಎಂದು ಮೂಲಗಳು ತಿಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments