Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಫೋನ್ ಬಂದ ಕೂಡಲೇ ಮದುವೆ ಬೇಡ ಅಂದ ವಧು: ಕೊನೆಯ ಕ್ಷಣದಲ್ಲಿ ಮದುವೆ ರದ್ದು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
hassan marriage

ತಾಳಿ ಕಟ್ಟುಲು ವರ ಮುಂದಾಗುತ್ತಿದ್ದಂತೆ ವಧು ಮದುವೆ ಆಗಲ್ಲ ಎಂದು ಹಠ ಹಿಡಿದು ಕುಳಿತ ಕಾರಣ ಕೊನೆಯ ಕ್ಷಣದಲ್ಲಿ ಮದುವೆ ರದ್ದಾದ ವಿಲಕ್ಷಣ ಘಟನೆ ಹಾಸನದಲ್ಲಿ ನಡೆದಿದೆ.

ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಈ ಘಟನೆ ಭಾರೀ ಸುದ್ದಿ ಮಾಡುತ್ತಿದೆ.

ಹಾಸನ ತಾಲೂಕಿನ ಬೂವನಹಳ್ಳಿ ಗ್ರಾಮದ ಪಲ್ಲವಿ ಹಾಗೂ ಆಲೂರು ತಾಲೂಕಿನ ವೇಣುಗೋಪಾಲ ಜಿ ಮದುವೆ ನಿಶ್ಚಯವಾಗಿತ್ತು. ತಾಳಿ ಕಟ್ಟುವ ಕೆಲವೇ ಕ್ಷಣಗಳ ಮೊದಲು ಕರೆಯನ್ನು ಸ್ವೀಕರಿಸಿ ಮಾತನಾಡಿದ ವಧು ತಾಳಿ ಕಟ್ಟಲು ವರ ಬರುತ್ತಿದ್ದಂತೆ ಮದುವೆ ಬೇಡ ಎಂದು ಹೇಳಿದ್ದಾಳೆ.

ವರ ಹಾಗೂ ಆತನ ಕುಟುಂಬದವರು ಮದುವೆ ಯಾಕೆ ಬೇಡ ಎಂದು ಕಾರಣ ಕೇಳಿದಾಗ ನನಗೆ ಮದುವೆ ಇಷ್ಟವಿಲ್ಲ. ಅಪ್ಪ-ಅಮ್ಮನನ್ನು ಬಿಟ್ಟಿರಲು ಆಗಲ್ಲ ಎಂದೆಲ್ಲಾ ಕತೆ ಹೇಳಿದ್ದಾಳೆ. ಆದರೆ ನಂತರ ಫೋನ್ ಯಾರು ಮಾಡಿದ್ದು? ಏನು ಮಾತನಾಡಿದೆ ಎಂದೆಲ್ಲಾ ಪ್ರಶ್ನೆಗಳನ್ನು ಕೇಳಿದಾಗ ನಿಜ ವಿಷಯ ಬಾಯಿ ಬಿಟ್ಟಿದ್ದಾಳೆ.

ಪೋಷಕರು, ಕುಟುಂಬಸ್ಥರು ವಧುವನ್ನು ಮನ ಒಲಿಸುವ ಪ್ರಯತ್ನ ಮಾಡಿದ್ದಾರೆ. ಆಕೆ ತಾನು ಬೇರೊಬ್ಬ ಹುಡುಗನ ಪ್ರೀತಿಸುತ್ತಿರುವುದಾಗಿ ಹೇಳಿದ್ದಾಳೆ. ಪೋಷಕರು, ಆಪ್ತರು ತಾಳಿ ಕಟ್ಟಲು ಸೂಚಿಸಿದರೂ ವರ ತಾಳಿ ಕಟ್ಟಲಿಲ್ಲ. ವಧು ಮದುವೆ ಮಂಟಪದಿಂದ ಹೊರ ನಡೆದಿದ್ದಾಳೆ.

ಈಶ್ವರಹಳ್ಳಿ ಕೂಡಿಗೆಯಲ್ಲಿ ಸರ್ಕಾರಿ ಶಾಲೆ ಶಿಕ್ಷಕನಾಗಿರುವ ವೇಣುಗೋಪಾಲ.ಜಿ ಬಹಳಷ್ಟು ಖರ್ಚು ಮಾಡಿ ಅದ್ಧೂರಿ ಮದುವಗೆ ವ್ಯವಸ್ಥೆ ಮಾಡಿದ್ದ. ಆದರೆ ಕೊನೆಗೆ ಮದುವೆ ಆಗಲಿಲ್ಲ.

ಕೊನೆಯ ಕ್ಷಣದಲ್ಲಿ ಮದುವೆ ಬೇಡ ಎಂದ ಮಗಳನ್ನು ಪೋಷಕರು ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ಆದರೆ ಆಕೆ ನಿರ್ಧಾರ ಬದಲಿಸಿಲ್ಲ.  ಮಗಳ ನಿರ್ಧಾರದಿಂದ ಆಘಾತಗೊಂಡ ಪೋಷಕರು ಕಣ್ಣೀರಿಟ್ಟಿದ್ದಾರೆ. ಮದುವೆ ಬೇಡ ಎಂದು ಹಸಮಣೆಯಿಂದ ಎದ್ದ ವಧು ಕಾರಿನ ಮೂಲಕ ಮದುವೆ ಮಂಟಪದಿಂದ ತೆರಳಿದ್ದಾಳೆ. ಎರಡೂ ಕುಟುಂಬದ ನಡುವೆ ಗಲಾಟೆ ನಡೆದಿದೆ. ಬಡಾವಣೆ ಹಾಗೂ ನಗರಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment