Thursday, June 11, 2026
Google search engine
Homeರಾಜ್ಯರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ: ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆ ಆರಂಭ

ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ: ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.

ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ವಿಷಯವನ್ನು ಘೋಷಿಸಿದ್ದಾರೆ. ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದೂ ಅವರು ವಿದ್ಯಾರ್ಥಿ ಸಮೂಹಕ್ಕೆ ಸಿಹಿ ಸುದ್ದಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಂಡು ಮಕ್ಕಳಿಗೂ ಈ ಸೌಲಭ್ಯವನ್ನು ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದರು.

ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಎಲ್ಲಾ ಮಕ್ಕಳಿಗೂ ಸೌಲಭ್ಯ

ಬಡವ ಶ್ರೀಮಂತ ಎನ್ನದೇ ಪ್ರತಿಯೊಬ್ಬ ಮಕ್ಕಳೂ ಆರ್ಥಿಕ ಹೊರೆ ಇಲ್ಲದೇ ತಮ್ಮ ವಿದ್ಯಾಭ್ಯಾಸ ಮಾಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಅದರಂತೆ ನಮ್ಮ ಹಿರಿಯ ನಾಯಕರಾದ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನವೇ ಈ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಣೆ ಮಾಡಿದ್ದರು. ಅದನ್ನು ಸಾರಿಗೆ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದರು.

ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ

ವಿದ್ಯಾರ್ಥಿಗಳು ಒಂದೆರಡು ದಿನಗಳಲ್ಲಿ ಕರ್ನಾಟಕ ಒನ್, ಬೆಂಗಳೂರು ಒನ್ ಕಚೇರಿಗಳಲ್ಲಿ ಉಚಿತ ಬಸ್ ಪಾಸ್ ಗೆ ನಿಗದಿತ ಅರ್ಜಿಯನ್ನು ಸಲ್ಲಿಸಬೇಕು. ಇದನ್ನು ಪರಿಶೀಲನೆ ನಡೆಸಿದ ನಂತರ ಬಸ್ ಪಾಸ್ ಅನ್ನು ಉಚಿತವಾಗಿ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಪಾವತಿಸಿರುವ ಹಣ ವಾಪಸ್

ಈಗಾಗಲೇ ಹಣ ಪಾವತಿ ಮಾಡಿ ಬಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಹಣವನ್ನು ವಾಪಸ್ ನೀಡಲಾಗುವುದು ಎಂದು ತಿಳಿಸಿದ ಬೈರತಿ ಸುರೇಶ್ ಅವರು, ನಮ್ಮ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments