ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಬಿಜೆಪಿ ನಾಯಕ ಹಾಗೂ ಖ್ಯಾತ ಉದ್ಯಮಿಯನ್ನು ದುಷ್ಕರ್ಮಿಗಳು ಮನೆಯ ಮುಂದೆಯೇ ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ರಾಜಧಾನಿ ಪಾಟ್ನದಲ್ಲಿ ಬಿಜೆಪಿ ನಾಯಕನ ಗೋಪಾಲ್ ಖೇಮ್ಕಾ ಅವರನ್ನು ಶನಿವಾರ ಮುಂಜಾನೆ 6.30ರ ಸುಮಾರಿಗೆ ಮನೆಯ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.
ಬಿಜೆಪಿ ನಾಯಕ ಗೋಪಾಲ್ ಖೇಮಾ ಮನೆಗೆ ಮರಳುತ್ತಿದ್ದಾಗ ಮನೆಯ ಪಕ್ಕದ ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ‘ಪನಾಚೆ’ ಹೋಟೆಲ್ ಬಳಿ ಗುಂಡಿನ ದಾಳಿಯಿಂದ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಒಂದು ಗುಂಡನ್ನು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಕೃತ್ಯದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಖೆಮ್ಕಾ ಅವರ ಮಗ ಗುಂಜನ್ ಖೇಮ್ಕಾ ಅವರನ್ನು 3 ವರ್ಷಗಳ ಹಿಂದೆ ಕೊಲೆ ಮಾಡಲಾಗಿತ್ತು.
ಘಟನಾ ಸ್ಥಳಕ್ಕೆ ಸಂಸದ ರಾಜೇಶ್ ರಂಜನ್ ಭೇಟಿ ನೀಡಿ, ನಿತೀಶ್ ಕುಮಾರ್ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಬಿಹಾರದಲ್ಲಿ ಯಾರೂ ಸುರಕ್ಷಿತವಾಗಿಲ್ಲ. ಬಿಹಾರ ಅಪರಾಧಿಗಳಿಗೆ ಆಶ್ರಯ ತಾಣವಾಗಿದೆ. ನಿತೀಶ್ ಜಿ, ದಯವಿಟ್ಟು ಬಿಹಾರವನ್ನು ಉಳಿಸಿ. ಖೆಮ್ಕಾ ಅವರ ಮಗ ಹತ್ಯೆಯಾದಾಗ ಸರ್ಕಾರ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದರೆ, ಗೋಪಾಲ್ ಖೇಮ್ಕಾ ಇಂದು ಕೊಲೆಯಾಗುತ್ತಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.



