Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಅಪರಾಧ

ಉದ್ಯಮಿಗೆ ಅಧಿಕ ಲಾಭದ ಆಮೀಷವೊಡ್ಡಿ 46.50 ಲಕ್ಷ ರೂ. ವಂಚನೆ: ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರು ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 4 ವೀಕ್ಷಣೆಗಳು
karwar online scam

ಫಾರೆಕ್ಸ್ ಟ್ರೇಡಿಂಗ್ ಅಪ್ಲಿಕೇಶನ್ ಮೂಲಕ ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಲಾಭ ಮಾಡಿಕೊಡುವುದಾಗಿ ಉದ್ಯಮಿಗೆ 46.5 ಲಕ್ಷ ರೂ. ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರನ್ನು ಉತ್ತರ ಕನ್ನಡದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಹೊನ್ನಾವರದ ಪ್ರಭಾತನಗರದ ನಿವಾಸಿ ಗಿರೀಶ್ (35) ಫೇಸ್‌ಬುಕ್‌ನಲ್ಲಿ ಟ್ರೇಡಿಂಗ್ ಜಾಹೀರಾತು ನೋಡಿ ವಂಚನೆಗೆ ಒಳಗಾಗಿದ್ದು, ಹೈದರಾಬಾದ್‌ನಲ್ಲಿ ಬಿಲ್ಲೆ ಪ್ರವೀಣಕುಮಾರ್ (35) ಮತ್ತು ವಿನಯ್ ಕುಮಾರ್ (30) ಎಂಬವರನ್ನು ಬಂಧಿಸಿದ್ದಾರೆ. ಶಮೀಮ್ ಅಖ್ತರ್ (55) ಎಂ.ಡಿ ಆಲಮ್ ಎಂಬುವವರನ್ನು ಬಂಧಿಸಲಾಗಿದೆ.

ಉದ್ಯಮಿ ಆಗಿರುವ ಗಿರೀಶ್, ‘MarketAxess’ ಎಂಬ ಆ್ಯಪ್ ಡೌನ್‌ಲೋಡ್ ಮಾಡಿಕೊಂಡಿದ್ದರು. ಬಳಿಕ ಆರೋಪಿಗಳು ವಾಟ್ಸಪ್ ಮೂಲಕ ಸಂಪರ್ಕಿಸಿ, ಮೇ 28, 2025 ರಿಂದ ಜುಲೈ 23, 2025 ರ ಅವಧಿಯಲ್ಲಿ ಹಂತ, ಹಂತವಾಗಿ ಒಟ್ಟು ರೂ. 46,50,000 ಹಣವನ್ನು ಹೂಡಿಕೆ ಮಾಡಿಸಿಕೊಂಡಿದ್ದರು. ಹಣ 75,00,000 ರೂ.ಗಳಾದರೂ ವಿತ್‌ ಡ್ರಾ ಮಾಡಲು ಬಾರದೇ ಇದ್ದಾಗ ಮೋಸ ಹೋಗಿರುವುದು ಗೊತ್ತಾಗಿ ಗಿರೀಶ್ ದೂರು ನೀಡಿದ್ದರು.

ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿ ​ಎಂ.ಡಿ ಆಲಮ್ (ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ), ಹೈದರಾಬಾದ್‌ನಲ್ಲಿ ಬಂಧಿಸಲಾದ ಬಿಲ್ಲೆ ಪ್ರವೀಣಕುಮಾರ್ (35) ಮತ್ತು ವಿನಯ್ ಕುಮಾರ್ (30) ಎಂಬವರನ್ನು ಬಂಧಿಸಿದ್ದಾರೆ.

ಬಂಧಿತರು ಆರ್​​ಬಿಎಲ್ (RBL) ಬ್ಯಾಂಕ್‌ನಲ್ಲಿ ರಿಲೇಶನ್‌ಶಿಪ್ ಮ್ಯಾನೇಜರ್‌ಗಳಾಗಿದ್ದು, ವಂಚನೆಗೆ ಅಕ್ರಮವಾಗಿ ಖಾತೆ ತೆರೆದು ಸಹಕರಿಸಿದ್ದರು. ​ಇನ್ನೋರ್ವ ಆರೋಪಿ ಶಮೀಮ್ ಅಖ್ತರ್ (55) ಎಂಬಾತ ಬಿಹಾರ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಈತ ದೂರುದಾರರನ್ನು ವಂಚಕರ ಬಲೆಗೆ ಬೀಳಿಸಲು ಸಹಕರಿಸಿದ್ದ. ​ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment