ಜನವರಿ 22ರಿಂದ ಒಂದು ವಾರ ಕಾಲ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ಮನರೇಗಾ ರದ್ದುಗೊಳಿಸಿ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಯೋಜನೆಯ ಕುರಿತು ಚರ್ಚೆ ನಡೆಸಲು ವಿಶೇಷ ಅಧಿವೇಶನ ಕರೆಯಲು ತೀರ್ಮಾನಿಸಿದೆ.
ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಸಚಿವ ಕೆಎಚ್ ಪಾಟೀಲ್ ವಿಬಿ ಜಿ ರಾಮ್ ಜಿ ಯೋಜನೆ ಪರಿಣಾಮಗಳ ಕುರಿತು ವಿಶೇಷ ಅಧಿವೇಶನದಲ್ಲಿ ಚರ್ಚಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.



