Thursday, November 21, 2024
Google search engine
Homeತಾಜಾ ಸುದ್ದಿರಾಜ್ಯದ ಕೃಷಿ ವಲಯದಲ್ಲಿ 250 ಕೋಟಿ ಹೂಡಿಕೆ ಮಾಡಲಿರುವ ಕೆನಡಾದ ವಿಟೆರಾ!

ರಾಜ್ಯದ ಕೃಷಿ ವಲಯದಲ್ಲಿ 250 ಕೋಟಿ ಹೂಡಿಕೆ ಮಾಡಲಿರುವ ಕೆನಡಾದ ವಿಟೆರಾ!

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು  ₹ 250 ಕೋಟಿ ಮೊತ್ತದ ಬಂಡವಾಳ ತೊಡಗಿಸುವುದಾಗಿ ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ಇಂದು ಇಲ್ಲಿ ಪ್ರಕಟಿಸಿದೆ.

ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ಜೊತೆಗೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ವಿಟೆರಾ ಕಂಪನಿ ರಾಜ್ಯದಲ್ಲಿ ಹೂಡಿಕೆ ಮಾಡುವ ನಿರ್ಧಾರ ಕೈಗೊಂಡಿದೆ.

ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ ಎಂದು ಸಚಿವ ಪಾಟೀಲ ತಿಳಿಸಿದ್ದಾರೆ.

ʼವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ  ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆʼ ಎಂದೂ ಸಚಿವರು ಹೇಳಿದ್ದಾರೆ.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ  ಹಾಗೂ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments