1563 ವಿದ್ಯಾರ್ಥಿಗಳ ಗ್ರೇಸ್ ಮಾರ್ಕ್ಸ್ ರದ್ದುಗೊಳಿಸಲಾಗುವುದು. ಮರು ಪರೀಕ್ಷೆ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗಬಹುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದೆ.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಫಲಿತಾಂಶ ರದ್ದುಗೊಳಿಸುವಂತೆ ಕೋರಿ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ವಿದ್ಯಾರ್ಥಿಗಳು ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದ್ದರು. ಸುಪ್ರೀಂಕೋರ್ಟ್ ಗೆ ಗುರುವಾರ ಮಾಹಿತಿ ನೀಡಿದ ಕೇಂದ್ರ ಸರ್ಕಾರ, ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್ ಮಾರ್ಕ್ಸ್ ರದ್ದುಗೊಳಿಸುವುದಾಗಿ ಹೇಳಿದೆ.
ಅಕ್ರಮ ನಡೆದಿದೆ ಎನ್ನಲಾದ 1563 ವಿದ್ಯಾರ್ಥಿಗಳ ಗ್ರೇಸ್ ಮಾರ್ಕ್ಸ್ ಅನ್ನು ವಾಪಸ್ ಪಡೆಯಲಾಗುವುದು. ಅಲ್ಲದೇ ಸುಪ್ರೀಂಕೋರ್ಟ್ ಬಯಸಿದರೆ ಈ 1563 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುವುದು. ಈ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮೇ 5ರಂದು ನಡೆದ ಫಲಿತಾಂಶದ ಜೊತೆ ತುಲನೆ ಮಾಡಿದ ನಂತರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದೆ.
ನೀಟ್ ಯುಜಿ0-2024 ಪರೀಕ್ಷೆಯನ್ನು ಸಂಪೂರ್ಣ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ. ಆದ್ದರಿಂದ ಮರು ಪರೀಕ್ಷೆ ಬೇಡ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದೆ.