Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಕೇಕ್ ಪ್ರಿಯಕರಿಗೆ ಬಿಗ್ ಶಾಕ್: 12 ಮಾದರಿಯ ಕೇಕ್ ಗಳಲ್ಲಿ ಕ್ಯಾನ್ಸರ್ ರಾಸಾಯನಿಕ ಪತ್ತೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
red velvet cake
red velvet cake

ಆಹಾರ ಪದಾರ್ಥಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕವಾಗಿ ರಾಸಯನಿಕ ಪದಾರ್ಥಗಳು ಬಳಕೆಯಾಗುತ್ತಿರುವುದು ದಿನಕ್ಕೊಂದು ಮಾದರಿಗಳಲ್ಲಿ ಪತ್ತೆಯಾಗುತ್ತಿದ್ದು, ಇದೀಗ ಕೇಕ್ ಗಳಲ್ಲಿ ಕೂಡ ಕ್ಯಾನ್ಸರ್ ಗೆ ಕಾರಣವಾಗುವ ರಾಸಯನಿಕಗಳು ಪತ್ತೆಯಾಗಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತನಿಖೆ ವೇಳೆ ರಾಜ್ಯದ ಹಲವೆಡೆ ಗೋಬಿ, ಕಬಾಬ್, ಪಾನಿಪುರಿ, ಕಾಟನ್ ಕ್ಯಾಂಡಿ, ತರಕಾರಿ ಹಾಗೂ ಹಣ್ಣುಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದ್ದು, ಇದೀಗ ಬೆಂಗಳೂರಿನಲ್ಲಿ ಮಾರಾಟ ಮಾಡಲಾಗುವ 12 ಮಾದರಿಯ ಕೇಕ್ ಗಳಲ್ಲಿ ಕೂಡ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ಕೇಕ್ ​​ಗೆ ಬಳಸುವ ಪದಾರ್ಥಗಳು ಕಲಬೆರಕೆಯಿಂದ ಕೂಡಿವೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕೇಕ್​ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲಿಸಿದಾಗ 12 ಮಾದರಿ ಕೇಕ್​ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ.

ಅತೀ ಹೆಚ್ಚು ಬೇಡಿಕೆಯ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ ಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕವಾದ ಬಣ್ಣ ಹೆಚ್ಚು ಬಣ್ಣ ಬಳಕೆ ಆಗುತ್ತಿರುವುದು ಲ್ಯಾಬ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ ಗೆ ಬಣ್ಣ ಬಳಕೆಗೆ ನಿರ್ಬಂಧಿಸಲಾಗಿದೆ.

ಕೇಕ್ ಗಳಲ್ಲಿ ಅಲೂನಾ ರೆಡ್, ಸನ್ ಸೆಟ್ ಯೆಲ್ಲೋ, ಪೊನುಸೆಯಾ 4R, ಕಾರ್ಮಿಯೋಸೆನ್ ಎಂಬ ಕೃತಕ ಬಣ್ಣಗಳ ಅಂಶ ಪತ್ತೆಯಾಗಿದೆ. ಆಹಾರ ಸುರಕ್ಷತಾ ಇಲಾಖೆಯ ಸೂಚನೆ ಪಾಲಿಸುವಂತೆ ಕೇಕ್ ತಯಾರಿಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment