Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ತಾಜಾ ಸುದ್ದಿ

ಜಾತಿ ಅಸಮಾನತೆ ಪೋಷಕರೇ ಗಾಂಧೀಜಿ ಹಂತಕರು: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 23 ವೀಕ್ಷಣೆಗಳು
siddramiah
ಜಾತಿ ಅಸಮಾನತೆ ಪೋಷಕರೇ ಗಾಂಧೀಜಿ ಹಂತಕರು: ಸಿಎಂ ಸಿದ್ದರಾಮಯ್ಯ

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ. ಜಾತಿ ಅಸಮಾನತೆಯ ಪೋಷಕರೇ ಗಾಂಧೀಜಿಯನ್ನು ಕೊಂದಿದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಾಂಧೀಜಿ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ.‌ ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಬ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು ಎಂದರು.

ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ ಅವರ ಮಾತನ್ನು ಪ್ರಸ್ತಾಪಿಸಿ, ಮನುಷ್ಯ ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕುವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ ಎಂದು ಸಿದ್ದರಾಮಯ್ಯ ವಿಷಾದಿಸಿದರು.

ಪ್ರಕೃತಿ ನಮ್ಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಅದು ಪೂರೈಸುವುದಿಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣವಾಗಿದೆ ಎಂದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಅವರ ಕಾಲಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಡ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ ಈಗ ಸಿಕ್ಕಾಪಟ್ಟೆ ಮಳೆ ಬರುತ್ತಿದೆ. ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಡ್ಯವನ್ನು ಆಚರಿಸುತ್ತಾರೆ. ಇದಕ್ಕೆ ಸರಿಯಾದ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು. ಆದರೆ ಈಗಿನ ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ನೆಹರೂ ಅವರು ವೈಜ್ಞಾನಿಕ ಮತ್ತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ದಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದರು. ಸರ್ವರನ್ನೂ ಒಳಗೊಳ್ಳುವ ಮತ್ತು ಅಹಿಂಸೆ ಗಾಂಧಿಯವರ ಮಾರ್ಗವಾಗಿತ್ತು. ಇದನ್ನು ಯುವಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ. ದೇಶದ ಶೇ.85 ರಷ್ಟು ಆಸ್ತಿ ಶೇ.1 ಶ್ರೀಮಂತರ ಕೈಗೆ ಸೇರುತ್ತಿದೆ. ಇದು ಅಪಾಯಕಾರಿ. ಈ ಆರ್ಥಿಕ ಅಸಮಾನತೆ ಹೋಗಲಾಡಿಸಲು ಗಾಂಧಿಯವರು ವಿಚಾರಗಳಲ್ಲಿ ಮಾರ್ಗಗಳಿವೆ ಎಂದು ಅವರು ಹೇಳಿದರು.

ಮಹಾತ್ಮಗಾಂಧಿಯವರು‌ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸುತ್ತೇವೆ. ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ.‌ ಗಾಂಧಿಯವರ ಆಶಯದಂತೆ ರಾತ್ರಿ 12 ಗಂಟೆಗೂ ನಮ್ಮ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಾಗಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ರಾಮಚಂದ್ರ ರಾಹಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಕಾರ್ಯಾಧ್ಯಕ್ಷ ವಿಶುಕುಮಾರ್, ದೆಹಲಿ ಸ್ಮಾರಕ ನಿಧಿ ಅಧ್ಯಕ್ಷ ಸಂಜೋಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment