Kannadavahini

ಬಾರಿಸು ಕನ್ನಡ ಡಿಂಡಿಮವ

ತಾಜಾ ಸುದ್ದಿ

38ನೇ ಬಾರಿ ಶೂನ್ಯಕ್ಕೆ ಔಟಾಗಿ ದಾಖಲೆ ಬರೆದ ವಿರಾಟ್ ಕೊಹ್ಲಿ!

ರನ್ ಗಳಿಸಲು ಪರದಾಡುತ್ತಿರುವ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಗುರುವಾರ ಆರಂಭಗೊಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಆರಂಭಗೊಳ್ಳಬೇಕಿದ್ದ ಪಂದ್ಯ ಮಳೆಯಿಂದ ಮೊದಲ ದಿನದಾಟ ರದ್ದಾಗಿತ್ತು. ಗುರುವಾರ ಟಾಸ್ ಗೆದ್ದ ಭಾರತ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿತು. ವಿರಾಟ್…

ಬ್ರಹ್ಮಕುಂಡಿಕೆಯಲ್ಲಿ ಉದ್ಭವಿಸಿದ ಕಾವೇರಿ: ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ

ಕೊಡಗು ಜಿಲ್ಲೆಯ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ ಕಾವೇರಿ ಪವಿತ್ರ ತೀರ್ಥೋದ್ಭವಿಸಿದ್ದು ಭಕ್ತಾದಿಗಳಿಗೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಿದಳು. ತಲಕಾವೇರಿ ಪುಣ್ಯಕ್ಷೇತ್ರದ ಬ್ರಹ್ಮಕುಂಡಿಕೆಯಲ್ಲಿ ನಿರೀಕ್ಷೆಯಂತೆ ಗುರುವಾರ ಬೆಳಗ್ಗೆ 7 ಗಂಟೆ 40 ನಿಮಿಷ ತುಲಾ ಲಗ್ನದಲ್ಲಿ ತೀರ್ಥೋದ್ಭ ಆಯಿತು. ಮೂರು ಬಾರಿ ಉಕ್ಕಿ ಬಂದ ಕಾವೇರಿ ಭಕ್ತರಿಗೆ ಕಾಣಿಸಿಕೊಂಡಿದ್ದು, ನೆರೆದಿರುವ ಭಕ್ತರಿಗೆ ಬ್ರಹ್ಮಕುಂಡಿಕೆಯಿಂದ ತೀರ್ಥ ಪ್ರೋಕ್ಷಣೆ…

ಕಲಬುರಗಿಯಲ್ಲಿ ಕಾರು-ಬೈಕ್-ಲಾರಿ ಡಿಕ್ಕಿ: ನಾಲ್ವರ ದುರ್ಮರಣ

ಕಾರು, ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ ಕಲಬುರಗಿ ತಾಲೂಕಿನ ಹಸನಾಪುರ ಬಳಿ ಸಂಭವಿಸಿದೆ. ಬೈಕ್‌ ಮತ್ತು ಕಾರಿನಲ್ಲಿದ್ದ ರಾಘವೇಂದ್ರ (35), ಮುಜಾಹಿದ್‌ (30), ಹುಸೇನ್ ಬಿ (45) ಮತ್ತು ಮೌಲಾಬಿ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಪರಮಾನಂದ ಹಾಗೂ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು…

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಸಂಜೀವ್ ಖನ್ನಾ ಹೆಸರು ಶಿಫಾರಸು!

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಹಾಲಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಧಿಕೃತವಾಗಿ ಶಿಫಾರಸು ಮಾಡಿದ್ದಾರೆ. ಪ್ರಸ್ತುತ ಸುಪ್ರೀಂಕೋರ್ಟ್ ನಲ್ಲಿ ಅತ್ಯಂತ ಅನುಭವಿ 2ನೇ ನ್ಯಾಯಮೂರ್ತಿಯಾಗಿರುವ ಸಂಜೀವ್ ಖನ್ನಾ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ನವೆಂಬರ್ 10ರಂದು ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಅವರ ಅಧಿಕಾರಾವಧಿ…

ಇಸ್ರೇಲ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 42,000ಕ್ಕೆ ಏರಿಕೆ: ಬೀದಿನಾಯಿಗೆ ಆಹಾರವಾಗುತ್ತಿರುವ ಶವಗಳು!

ಹಮಾಸ್ ಉಗ್ರರನ್ನು ಕೇಂದ್ರೀಕರಿಸಿ ಗಾಜಾ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 42 ಸಾವಿರಕ್ಕೇರಿದ್ದು, ಶವಗಳು ಬೀದಿನಾಯಿ ಪಾಲಾಗುತ್ತಿವೆ. ಗಾಜಾದಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಶವಗಳನ್ನು ಬೀದಿನಾಯಿಗಳು ಕಚ್ಚಿ ತಿನ್ನುತ್ತಿವೆ. ಇದರಿಂದ ಶವಗಳಿಗೆ ಕನಿಷ್ಠ ಅಂತ್ಯ ಸಂಸ್ಕಾರದ ಭಾಗ್ಯವೂ ಇಲ್ಲದಂತಾಗಿದೆ ಎಂದು ಸ್ಥಳೀಯ ರಕ್ಷಣಾ ಸಂಸ್ಥೆಗಳ ಪ್ರತಿನಿಧಿಗಳು ಹೇಳಿದ್ದಾರೆ. ಯುದ್ಧಪೀಡಿತ ಪ್ರದೇಶಗಳಲ್ಲಿ ಸ್ನೇಹಿತರು, ಕುಟುಂಬದವರ ಶವಗಳಿಗಾಗಿ…

ಕಿಲಾರಿ ಬೊಮ್ಮಯ್ಯ, ರಾಜಶೇಖರ, ರತ್ನಮ್ಮ ಸೇರಿ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ

2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳ್ಗೆಗೆ ಶ್ರಮಿಸಿದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಬೆಂಗಳೂರು ವಿಭಾಗ: ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ ಗಡ್ಡದಾರಹಟ್ಟಿ, ಚಳ್ಳಕೆರೆ ತಾಲ್ಲೂಕು ಚಿತ್ರದುರ್ಗ ಜಿಲ್ಲೆಯವರಾದ…

ಗೆಳೆಯನನ್ನು ಸಿಕ್ಕಿ ಹಾಕಿಸಲು ಸರಣಿ ಹುಸಿಬಾಂಬ್ ಕರೆ ಮಾಡಿದ 17 ವರ್ಷದ ಯುವಕ ಅರೆಸ್ಟ್!

ಕಳೆದ ಮೂರು ದಿನಗಳಿಂದ ಸರಣಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿದ ಸಂಚಲನ ಮೂಡಿಸಿದ್ದ ಪ್ರಕರಣವನ್ನು ಅಧಿಕಾರಿಗಳು ಕೊನೆಗೂ ಭೇದಿಸಿದ್ದು, 17 ವರ್ಷದ ಯುವಕನನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಮೂರು ದಿನಗಳಿಂದ ಹುಸಿಬಾಂಬ್ ಬೆದರಿಕೆ ಕರೆಗಳಿಂದ 12ಕ್ಕೂ ಹೆಚ್ಚು ವಿಮಾನಗಳ ಸಂಚಾರ ಮಾರ್ಗ ಬದಲಾಯಿಸಲಾಗಿತ್ತು. ಅದರಲ್ಲೂ ಪ್ರಮುಖವಾಗಿ ಏರ್ ಇಂಡಿಯಾ ವಿಮಾನಗಳನ್ನೇ ಗುರಿಯಾಗಿ ಬೆದರಿಕೆ…

ಸೂಪರ್ ಸ್ಟಾರ್ ರಜನಿಕಾಂತ್ ಮನೆಗೆ ನುಗ್ಗಿದ ಮಳೆ ನೀರು!

ತಮಿಳುನಾಡು ಚೆನ್ನೈ ಭಾರೀ ಮಳೆಗೆ ತತ್ತರಿಸಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರ ಚೆನ್ನೈನ ನಿವಾಸಕ್ಕೂ ಮಳೆ ನೀರು ನುಗ್ಗಿದೆ. ಚೆನ್ನೈನ ಅತ್ಯಂತ ಪ್ರತಿಷ್ಠಿತ ಬಡಾವಣೆ ಆಗಿರುವ ಪೋಸ್ ಗಾರ್ಡನ್ ನಲ್ಲಿರುವ ರಜನಿಕಾಂತ್ ನಿವಾಸಕ್ಕೆ ಮಳೆ ನೀರು ನುಗ್ಗಿದೆ. ಇದರಿಂದ ರಜನಿಕಾಂತ್ ಭೇಟಿಗೆ ಆಗಮಿಸುವ ಅಭಿಮಾನಿಗಳು ಹಾಗೂ ಗಣ್ಯರಿಗೆ ತೊಂದರೆ ಉಂಟಾಗಿದೆ….

23 ಕೋಟಿಯ ಕ್ಲಾಸೆನ್, 18 ಕೋಟಿಗೆ ಕಮಿನ್ಸ್ ಉಳಿಸಿಕೊಂಡ ಸನ್ ರೈಸರ್ಸ್ ಹೈದರಾಬಾದ್!

ಹೆನ್ರಿಚ್ ಕ್ಲಾಸೆನ್ ಮತ್ತು ಪ್ಯಾಟ್ ಕಮಿನ್ಸ್ ಸೇರಿದಂತೆ ಕಳೆದ ಐಪಿಎಲ್ ಆವೃತ್ತಿಯ ಅತ್ಯಂತ ದುಬಾರಿ ಆಟಗಾರರನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ಉಳಿಸಿಕೊಂಡು ಅಚ್ಚರಿ ಮೂಡಿಸಿದೆ. 2025ರ ಆವೃತ್ತಿಯ ಐಪಿಎಲ್ ಹರಾಜಿನಲ್ಲಿ ಕ್ಲಾಸೆನ್ ಅವರನ್ನು 23 ಕೋಟಿ ರೂ.ಗೆ ಖರೀದಿಸಿತ್ತು. ಮೊದಲ ಪ್ರಾಶಸ್ತ್ಯ ಆಟಗಾರನಾಗಿ ಕ್ಲಾಸೆನ್ ಅವರನ್ನು ಹಾಗೂ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅವರನ್ನು…

ಕಾವೇರಿ 5ನೇ ಹಂತದ ಯೋಜನೆಗೆ ಶಂಕುಸ್ಥಾಪನೆ: ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು!

ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಾಲನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಯೋಜನೆಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ…