ಡಿಕೆ ಶಿವಕುಮಾರ್ ಕನಸಿಗೆ ತಣ್ಣೀರು: ಬೆಂಗಳೂರು ದಕ್ಷಿಣ ಹೆಸರು ಮರನಾಮಕರಣ ಪ್ರಸ್ತಾಪಕ್ಕೆ ಕೇಂದ್ರ ತಿರಸ್ಕಾರ
ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಕನಸಿಗೆ ಕೇಂದ್ರ ತಣ್ಣೀರು ಎರಚಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಸ್ತಾಪವನ್ನು ತಿರಸ್ಕರಿಸಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಪತ್ರ ಬರೆದಿದ್ದು, ಇನ್ನು ಮುಂದಿನ ದಿನಗಳಲ್ಲಿ…
ಪಶ್ಚಿಮ ಬಂಗಾಳ ಬಿಜೆಪಿಗೆ ಮಹಿಳಾ ಸಾರಥಿ?
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದ್ದು, ಇಬ್ಬರು ಪ್ರಮುಖ ಮಹಿಳಾ ನಾಯಕರನ್ನು ಪಕ್ಷ ಪರಿಗಣಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಸಂಸದೆ ಲಾಕೆಟ್ ಚಟರ್ಜಿ ಮತ್ತು ಬಂಗಾಳದ ಶಾಸಕಿ ಅಗ್ನಿಮಿತ್ರ ಪಾಲ್ ಈ ಹುದ್ದೆಗೆ ಮುಂಚೂಣಿಯಲ್ಲಿರುವ ನಾಯಕಿಯರಾಗಿದ್ದಾರೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಇಬ್ಬರೂ ನಾಯಕರನ್ನು…
ಮುಂದಿನ ಬಾರಿ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ವಿಶ್ವಾಸ
ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಂಗಳವಾರ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಹಾಗೂ ರಾಜ್ಯದ ಬಿಜೆಪಿಯವರು ಸುಳ್ಳು ಸುಳ್ಳೆ ಟೀಕಿಸಿದರು. ಗ್ಯಾರಂಟಿಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ರಾಜ್ಯ ದಿವಾಳಿಯಾಗುತ್ತದೆ…
ಬಿಜೆಪಿಗೆ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು: ರಾಹುಲ್ ಗಾಂಧಿ ಅಸಮಾಧಾನ
ಬಿಜೆಪಿ ಪರವಾಗಿ ಗೌಪ್ಯವಾಗಿ ಕೆಲಸ ಮಾಡುತ್ತಿರುವ ಮುಖಂಡರು ಕಾಂಗ್ರೆಸ್ ನಲ್ಲಿ ಇದ್ದಾರೆ. ಅಂತಹವರು ಸುಧಾರಿಸಿಕೊಳ್ಳದೇ ಇದ್ದರೆ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಅಹಮದಾಬಾದ್ ನಲ್ಲಿ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ನಲ್ಲಿ ಬಿಜೆಪಿ ಪರ ಕೆಲಸ ಮಾಡುವ ಕಾಂಗ್ರೆಸ್ ನಲ್ಲಿ ಕೆಲವರು ಇದ್ದಾರೆ. ಅಂತಹ 30-40…
ಕ್ಷೇತ್ರ ಪುನರ್ವಿಂಗಣೆ ವಿವಾದ: 7 ರಾಜ್ಯಗಳ ಸಿಎಂ ಸಭೆ ಕರೆದ ತಮಿಳುನಾಡು
ಕೇಂದ್ರ ಸರ್ಕಾರದ ಕ್ಷೇತ್ರ ಪುನರ್ವಿಂಗಣೆ ಪ್ರಸ್ತಾಪದ ಹಿಂದಿನ ರಾಜಕೀಯ ಉದ್ದೇಶಗಳ ಕುರಿತು ಚರ್ಚೆ ನಡೆಸಲು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 7 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಮಾರ್ಚ್ 22ರಂದು ಚೆನ್ನೈನಲ್ಲಿ ನಡೆಯಲಿರುವ ರಾಜಕೀಯ ಪಕ್ಷಗಳ ಜಂಟಿ ಕ್ರಿಯಾ ಸಮಿತಿ ರಚನೆ ಕುರಿತು ಚರ್ಚಿಸಲು 7 ರಾಜ್ಯಗಳ ಮುಖಂಡರ ಸಭೆ ಕರೆಯಲಾಗಿದೆ. ಬಂಗಾಳದ ಮಮತಾ ಬ್ಯಾನರ್ಜಿ,…
ಔರಂಗಜೇಬ್ ಹೊಗಳಿದ ಶಾಸಕ ಅಬುಅಜ್ಮಿ ಅಮಾನತು
ಮುಂಬೈ: ಔರಂಗಜೇಬನನ್ನು ಹೊಗಳಿ ಭಾರೀ ಟೀಕೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ಶಾಸಕ ಅಬು ಅಸಿಮ್ ಅಜ್ಮಿ ಅವರನ್ನು ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಿಂದ ಬುಧವಾರ ಅಮಾನತು ಮಾಡಲಾಗಿದೆ. ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನ ಮುಗಿಯುವವರೆಗೂ ಅವರನ್ನು ಅಮಾನತು ಮಾಡಲಾಗಿದೆ. ವಿಧಾನಸಭೆ ಅಧಿವೇಶನ ಮಾರ್ಚ್ ೨೬ರ ವರೆಗೆ ನಡೆಯಲಿದೆ. ಅಲ್ಲಿಯವರೆಗೂ ಅಬು ಅಜ್ನಿ ಅಮಾನತಿನಲ್ಲಿ ಇರಲಿದ್ದಾರೆ. ಸಚಿವ ಚಂದ್ರಕಾಂತ್…
ನಿತೀಶ್ ಕುಮಾರ್ ಬಿಟ್ಟು ಯಾರೂ ಬೇಕಾದರೂ ಸಿಎಂ ಆಗಬಹುದು: ಪ್ರಶಾಂತ್ ಕಿಶೋರ್
ಬಿಹಾರದಲ್ಲಿ ಬಿಜೆಪಿ ಜೊತೆಗೂಡಿ ವಿಧಾನಸಭೆ ಚುನಾವಣೆ ಎದುರಿಸಬಹುದು. ಆದರೆ ಚುನಾವಣೆ ನಂತರ ಸಿಎಂ ಆಗಲು ಯಾರ ಜೊತೆ ಮೈತ್ರಿ ಬೇಕಾದರೂ ಮಾಡಿಕೊಳ್ಳಬಹುದು ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಪಶ್ಚಿಮ ಚಂಪಾರನ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಕಳಪೆ ಸಾಧನೆ ಮಾಡಲಿದೆ. ಆದರೆ…
ಮಾಹಿತಿ ಹಕ್ಕು ಕಸಿಯುತ್ತಿರುವ ಮೋದಿ ಸರಕಾರ: ಮಲ್ಲಿಕಾರ್ಜುನ ಖರ್ಗೆ ಆರೋಪ
ನವದೆಹಲಿ: ದತ್ತಾಂಶ ಸಂರಕ್ಷಣೆ ಹೆಸರಿನಲ್ಲಿ ಮೋದಿ ಸರ್ಕಾರ ಜನರಿಂದ ಮಾಹಿತಿ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಜನ ಸಾಮಾನ್ಯನ ಹಕ್ಕುಗಳನ್ನು ರಕ್ಷಿಸಲು ನಮ್ಮ ಪಕ್ಷ ಸರ್ವಾಧಿಕಾರದ ವಿರುದ್ಧ ಹೋರಾಡಲಿದೆ ಎಂದು ಅವರು ಹೇಳಿದರು. `ಒಂದೆಡೆ ಭಾರತವು ತಪ್ಪು ಮಾಹಿತಿ ಹಂಚಿಕೊಳ್ಳುವ ದೇಶಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ ದತ್ತಾಂಶ ಸಂರಕ್ಷಣೆ ಹೆಸರಿನಲ್ಲಿ…
ಮಾರ್ಚ್ 21ರೊಳಗೆ ಬಿಜೆಪಿಗೆ ಹೊಸ ಸಾರಥಿ?
ಹೋಳಿ ಹಬ್ಬದ ನಂತರ ಇದೇ ಮಾರ್ಚ್ 21ರೊಳಗೆ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮುಂದಿನ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗುವ ಸಾಧ್ಯತೆಯಿದೆ. ಮಾರ್ಚ್ 21ರಿಂದ 23ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಭೆಗೂ ಮೊದಲು ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗಲಿದೆ. ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗಾಗಿ…
100 ಕೋಟಿ ಅನುದಾನ ಬಿಡುಗಡೆ ಮಾಡಿ: ಸಿಎಂಗೆ ಬೆಂಗಳೂರಿನ ಬಿಜೆಪಿ ಶಾಸಕರು, ಸಂಸದರಿಂದ ಮನವಿ
ಈ ಬಾರಿಯ ಬಜೆಟ್ ನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ತಲಾ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿ…