ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ದಿಢೀರನೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್ ಗೆ 2 ರೂ. ಇಳಿಕೆ ಮಾಡಿದೆ.
ಮಾರ್ಚ್ 15ರಂದು ಬೆಳಿಗ್ಗೆ 6 ಗಂಟೆಯಿಂದ ನೂತನ ದರ ಜಾರಿಗೆ ಬರಲಿದ್ದು, ಡೀಸೆಲ್ ಬಳಸುವ 58 ಲಕ್ಷ ಲಘು ವಾಹನಗಳು, 6 ಕೋಟಿ ಕಾರು ಹಾಗೂ 27 ಕೋಟಿ ದ್ವಿಚಕ್ರ ವಾಹನ ಸವಾರರಿಗೆ ಅನುಕೂಲವಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಮ್ ಸಚಿವಾಲಯ ತಿಳಿಸಿದೆ.
ಇತರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಈಗಲೂ ಕಡಿಮೆ ಇದೆ. ಫ್ರಾನ್ಸ್, ಇಟಲಿ, ಜರ್ಮನಿ ಮತ್ತು ಸ್ಪೇನ್ ದೇಶಗಳಲ್ಲಿ ಭಾರತಕ್ಕಿಂತ ಶೇ.50ರಿಂದ 70ರಷ್ಟು ಹೆಚ್ಚಾಗಿದೆ ಎಂದು ಇಂಧನ ದರ ಏರಿಕೆಯನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.