Thursday, 29 October 2026 — Kannadavahini
BREAKING NEWS
ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಜಿಲ್ಲಾ ಸುದ್ದಿ

ಶ್ರೀರಂಗಪಟ್ಟಣ-ಅರಸಿಕೆರೆ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿಗೆ ಕೇಂದ್ರ ಒಪ್ಪಿಗೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
hd kumarswamy
hd kumarswamy

ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿದ್ದಾರೆ.

ಕೆ ಆರ್ ಪೇಟೆ ಶಾಸಕ ಹೆಚ್.ಟಿ.ಮಂಜುನಾಥ್ ಅವರ ಮನವಿ ಮೇರೆಗೆ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದ ಮಂಡ್ಯ ಸಂಸದರು ಆಗಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಯೋಜನೆಯ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದರು.

ಶ್ರೀರಂಗಪಟ್ಟಣ – ಕೆ.ಆರ್.ಪೇಟೆ – ಪಾಂಡವಪುರ – ಚನ್ನರಾಯಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದರು.

ಈ ರಸ್ತೆಯು ತಾಲೂಕು ಕೇಂದ್ರಗಳಿಂದ ನಗರಗಳಿಗೆ ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿದ್ದು, ಆರ್ಥಿಕವಾಗಿ ದೊಡ್ಡ ಕೊಡುಗೆಯನ್ನು ನೀಡಲಿದೆ. ಮುಖ್ಯವಾಗಿ ಈ ಭಾಗದಲ್ಲಿ ಪ್ರವಾಸೋದ್ಯಮ, ಕೃಷಿ, ಕೈಗಾರಿಕೆ ಕ್ಷೇತ್ರಗಳಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಕೇಂದ್ರ ಸಚಿವರು ನಿತಿನ್ ಗಡ್ಕರಿ ಅವರಿಗೆ ಮನವರಿಕೆ ಮಾಡಿಕೊಟ್ಟರು.

ಕೃಷಿ ಉತ್ಪನ್ನಗಳಾದ ಹಾಲು, ತರಕಾರಿ ಮುಂತಾದವುಗಳನ್ನು ಗ್ರಾಮೀಣ ಪ್ರದೇಶಗಳಿಂದ ಮೈಸೂರು, ಬೆಂಗಳೂರು, ಹಾಸನ ಮತ್ತಿತರೆ ನಗರಗಳಿಗೆ ಪೂರೈಸಲು ಅನುಕೂಲವಾಗಲಿದೆ. ಜತೆಗೆ, ಶ್ರೀರಂಗಪಟ್ಟಣ, ಜಗದ್ವಿಖ್ಯಾತ ಪಕ್ಷಿಧಾಮ ರಂಗನತಿಟ್ಟು ಸೇರಿದಂತೆ ಹಲವಾರು ಪ್ರವಾಸಿ ತಾಣಗಳನ್ನು ತಲುಪಲು ಜನತೆಗೆ ಅನುಕೂಲವಾಗುತ್ತದೆ ಎಂಬ ಅಂಶವನ್ನು ಕುಮಾರಸ್ವಾಮಿ ಅವರು ಸಾರಿಗೆ ಸಚಿವರ ಗಮನಕ್ಕೆ ತಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8395 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment