Wednesday, July 1, 2026
Google search engine
Homeತಾಜಾ ಸುದ್ದಿರಾಜ್ಯ ಸರ್ಕಾರದ ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ!

ರಾಜ್ಯ ಸರ್ಕಾರದ ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ!

ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 50000 ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ ಪ್ರಮುಖ ಆಹಾರ ಪದಾರ್ಥಗಳಲ್ಲಿ ಅಕ್ಕಿಯೂ ಸೇರಿದೆ. ಕರ್ನಾಟಕ ಅಧಿಕ ಭತ್ತ ಬೆಳೆಯುವ ರಾಜ್ಯಗಳಲ್ಲಿ ಒಂದಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಉತ್ಪಾದಿಸುತ್ತಿದೆ.

ಹಾಲಿ ರಾಜ್ಯದಲ್ಲಿ 48.91 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಉತ್ಪಾದನಾ ಸಾಮರ್ಥ್ಯವಿದ್ದು ಆದರೆ ಕೇಂದ್ರದಿಂದ ಬೆಂಬಲ ಬೆಲೆಯೊಂದಿಗೆ ಕೇವಲ 1.5 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಕೇಂದ್ರ ಸರ್ಕಾರ ಕೂಡಲೇ ಮದ್ಯ ಪ್ರವೇಶಿಸಿ 2024-25ನೇ ಸಾಲಿನಲ್ಲಿ ಬೆಂಬಲ ಬೆಲೆಯೊಂದಿಗೆ ಕನಿಷ್ಠ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ನಿರ್ದೇಶನ ನೀಡುವಂತೆ ಕೃಷಿ ಸಚಿವ ಎನ್.ಚಲವರಾಯಸ್ವಾಮಿ ಮನವಿ ಮೇರೆಗೆ ಕೇಂದ್ರ ಒಪ್ಪಿಗೆ ಸೂಚಿಸಿದೆ.

ಚಲುವರಾಯಸ್ವಾಮಿ ಡಿಸೆಂಬರ್ 12ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿ ಹೆಚ್ಚುವರಿ ಅಕ್ಕಿ ಖರೀದಿಗೆ ಒಪ್ಪಿಗೆ ಸೂಚಿಸಿದೆ.

ಸ್ಪಂದನೆ ನೀಡಿರುವ ಕೇಂದ್ರ ಆಹಾರ ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಸಾರ್ವಜನಿಕ ವಿತರಣೆ ಮತ್ತು ಹೊಸ ನವೀಕರಿಸಬಹುದಾದ ಇಂಧನ ಸಚಿವಾಲಯ 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಸೂಕ್ತ ಕ್ರಮ ವಹಿಸುವಂತೆ ರಾಜ್ಯದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಇಲಾಖೆ ಕಾರ್ಯದರ್ಶಿರವರಿಗೆ ನಿರ್ದೇಶನ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments