ಚಿನ್ನ, ಬೆಳ್ಳಿ, ಪ್ಲಾಟಿನಂ, ಮೊಬೈಲ್, ಎಲೆಕ್ಟ್ರಾನಿಕ್ ವಸ್ತು ಸೇರಿದಂತೆ ಹಲವು ವಸ್ತುಗಳ ಮೇಲಿನ ಕಸ್ಟಮ್ಸ್ ಡ್ಯೂಟಿಯನ್ನು ಕಡಿತಗೊಳಿಸಿದೆ.
ಕೇಂದ್ರ ವಿತ್ತ ಸಚಿವೆ ಮಂಗಳವಾರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್, ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ಡ್ಯೂಟಿಯನ್ನು ಶೇ.6ರಷ್ಟು ಕಡಿತಗೊಳಿಸಿದ್ದರೆ, ಪ್ಲಾಟಿನಂ ಮೇಲಿನ ತೆರಿಗೆಯನ್ನು ಶೇ.6.4 ಕಡಿತ ಮಾಡಿದ್ದಾರೆ. ಇದರಿಂದ ಮಧ್ಯಮ ವರ್ಗದ ಮಹಿಳೆಯರ ಆಭರಣ ಖರೀದಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಮೊಬೈಲ್ ಫೋನ್ ಮತ್ತು ಮೊಬೈಲ್ ಚಾರ್ಜರ್ ಮೇಲಿನ ಸುಂಕವನ್ನು ಕಡಿತಗೊಳಿಸಲಾಗಿದೆ. ಅಲ್ಲದೇ ಕ್ಯಾನ್ಸರ್ ಔಷಧಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ.
ಪಾದರಕ್ಷೆ, ಪರ್ಸ್ ಮುಂತಾದ ಚರ್ಮದ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಶೇ.12ರಿಂದ ಶೇ.5ಕ್ಕೆ ಇಳಿಸಲಾಗಿದೆ. ಸೋಲಾರ್ ಪ್ಯಾನೆಲ್ ಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಲಾಗಿದೆ.
ಇದೇ ವೇಳೆ ಗಾರ್ಮೆಂಟ್ಸ್ ಮೇಲೆ ಹೊರೆ ಹಾಕಲಾಗಿದ್ದು, ಬಟ್ಟೆ, ಆಮದು ಮಾಡಲಾದ ಬಟ್ಟೆ ಹಾಗೂ ಪ್ಲಾಸ್ಟಿಕ್ ಮೇಲೆ ತೆರಿಗೆ ಹೆಚ್ಚಿಸಲಾಗಿದೆ.