ನವದೆಹಲಿ: ಲೈಂಗಿಕ ದೌರ್ಜನ್ಯ ಪ್ರಕರಣ ಹೊರ ಬೀಳುತ್ತಿದ್ದಂತೆ, ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ನಿನ್ನೆ ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ. ಎಲ್ಲಿದ್ದರೂ ಬಂದು ಪೊಲೀಸರಿಗೆ ಶರಣಾಗು ಅಂತ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪತ್ರ ಬರೆದು ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.
ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಅವರ ಡಿಪ್ಲೋಮ್ಯಾಟಿಕ್ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಪತ್ರ ಬರೆಯಲಾಗಿತ್ತು. ಅಲ್ಲದೇ ಸಿಎಂ ಸಿದ್ಧರಾಮಯ್ಯ ಕೂಡ ಪತ್ರ ಬರೆದು ಆಗ್ರಹಿಸಿದ್ದರು.
ಈ ಬೆನ್ನಲ್ಲೇ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪಾಸ್ ಪೋರ್ಟ್ ರದ್ದುಗೊಳಿಸುವಂತ ಪ್ರಕ್ರಿಯೆಯನ್ನು ಆರಂಭಿಸಿತ್ತು. ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರವು ಪ್ರಜ್ವಲ್ ರೇವಣ್ಣ ಅವರಿಗೆ ಪಾಸ್ ಪೋರ್ಟ್ ರದ್ದತಿ ಸಂಬಂಧ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.
ಅಂದಹಾಗೇ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಾಸ್ ಬರೋದಕ್ಕೆ ಟಿಕೆಟ್ ಬುಕ್ ಮಾಡಿ, ಬುಕ್ ಮಾಡಿ ಕ್ಯಾನ್ಸಲ್ ಮಾಡುತ್ತಿದ್ದಾರೆ. ಅವರನ್ನು ಬಂಧಿಸೋದಕ್ಕೆ ತುದಿಗಾಲಲ್ಲಿ ನಿಂತಿರುವಂತ ಎಸ್ಐಟಿ ಪೊಲೀಸರು, ಬಂಧನದ ವಾರೆಂಟ್ ಕೂಡ ಕೋರ್ಟ್ ನಿಂದ ಪಡೆದಿದ್ದಾರೆ. ಸದ್ಯ ಕಳ್ಳ-ಪೊಲೀಸ್ ಆಟ ಮುಂದುವರೆದಿದ್ದು, ಯಾವಾಗ ಇದಕ್ಕೆ ತೆರೆ ಬೀಳುತ್ತೋ ಅಂತ ಕಾದು ನೋಡಬೇಕಿದೆ.