ಸಿಬಿಐ ಒಕ್ಕೂಟ ವ್ಯವಸ್ಥೆಯ ನಿಯಂತ್ರಣದಲ್ಲಿ ಇಲ್ಲ. ಆದ್ದರಿಂದ ತನಿಖೆಗೆ ರಾಜ್ಯಗಳ ಅನುಮತಿ ಬೇಕಾಗಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಸಿಬಿಐ ಒಕ್ಕೂಟ ವ್ಯವಸ್ಥೆಗೆ ಒಳಪಟ್ಟಿದ್ದು, ರಾಜ್ಯ ಸರ್ಕಾರಗಳ ಅನುಮತಿ ಪಡೆಯದೇ ತನಿಖೆ ಕೈಗೆತ್ತಿಕೊಳ್ಳುತ್ತಿರುವುದನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂಕೋರ್ಟ್ ಗೆ ಮೊರೆ ಹೋಗಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ಗುರುವಾರ ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದೆ.
ಸಂವಿಧಾನದ 131ನೇ ಕಾಯ್ದೆ ಪ್ರಕಾರ ಸಿಬಿಐ ಒಕ್ಕೂಟ ವ್ಯವಸ್ಥೆಯ ನಿಯಂತ್ರಣಕ್ಕೆ ಒಳಪಟ್ಟಿದೆ. ರಾಜ್ಯ ಸರ್ಕಾರಗಳ ಗಮನಕ್ಕೆ ತಾರದೇ ಅಥವಾ ಅನುಮತಿ ಪಡೆಯದೇ ತನಿಖೆ ನಡೆಸುವಂತಿಲ್ಲ. ಆದರೆ ಸಿಬಿಐ ಕೇಂದ್ರ ಸರ್ಕಾರ ಹಿಡಿತಕ್ಕೆ ತೆಗೆದುಕೊಂಡು ಚುನಾವಣೆ ಸಂದರ್ಭದಲ್ಲಿ ದಾಳಿ ನಡೆಸಿ ಮತದಾರರಲ್ಲಿ ಪ್ರಭಾವ ಬೀರಲು ಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಆರೋಪಿಸಿದೆ.
ನ್ಯಾಯಮೂರ್ತಿ ಬಿಆರ್ ರವಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಒಕ್ಕೂಟ ವ್ಯವಸ್ಥೆಗೆ ಒಳಪಟ್ಟಿಲ್ಲ ಎಂದು ವರದಿ ನೀಡಿದರು.
ಸಂವಿಧಾನದ 131ನೇ ಕಾಯ್ದೆ ಪ್ರಕಾರ ಸಿಬಿಐ ಸ್ವತಂತ್ರ ಸಂಸ್ಥೆ ಆಗಿದೆ ಎಂದು ತಿಳಿಸಿದ್ದಾರೆ. ಆದರೆ ಜನರನ್ನು ಹೆದರಿಸುವ ಉದ್ದೇಶದಿಂದ ಬಳಸುವಂತಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.