Wednesday, May 20, 2026
Google search engine
Homeರಾಜ್ಯಮಾವು ಬೆಳೆಗಾರರಿಗೆ ಸಿಹಿಸುದ್ದಿ: ಕ್ವಿಂಟಲ್ ಗೆ 1616 ರೂ. ಪರಿಹಾರ ಧನ ಘೋಷಿಸಿದ ಕೇಂದ್ರ

ಮಾವು ಬೆಳೆಗಾರರಿಗೆ ಸಿಹಿಸುದ್ದಿ: ಕ್ವಿಂಟಲ್ ಗೆ 1616 ರೂ. ಪರಿಹಾರ ಧನ ಘೋಷಿಸಿದ ಕೇಂದ್ರ

ಮಾವು ಬೆಳೆಗೆ ಕ್ವಿಂಟಲ್ ಗೆ 1616 ರೂ. ಪರಿಹಾರ ಧನ ಘೋಷಿಸುವ ಮೂಲಕ ಕೇಂದ್ರ ಸರ್ಕಾರ ಮಾವು ಬೆಳಗಾರರಿಗೆ ನೆರವು ಘೋಷಿಸಿದೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ 2025ನೇ ಸಾಲಿನ ಮಾವು ಬೆಳೆಗೆ ಕ್ವಿಂಟಲ್ ಗೆ 1616 ರೂ. ಪರಿಹಾರ ಮೊತ್ತ ಘೋಷಿಸಿದರು.
ಎಂಐಎಸ್ ಯೋಜನೆಯಡಿ ಪರಿಹಾರ ನೀಡಲು ಅನುಮೋದನೆ ನೀಡಲಾಗಿದ್ದು, ಕರ್ನಾಟಕದ 2,50,000 ಮೆಟ್ರಿಕ್ ಟನ್ ವರೆಗೆ ಮಾವು ಬೆಳೆಗೆ ಪರಿಹಾರ ದೊರೆಯಲಿದೆ.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರ ಸರ್ಕಾರದ ಪತ್ರ ಬರೆದ ಬೆನ್ನಲ್ಲೇ ಪರಿಹಾರ ಮೊತ್ತ ಘೋಷಿಸುವ ಮೂಲಕ ಸ್ಪಂದಿಸಿದೆ.
ನಫೆಡ್ ಮೂಲಕ ಮಾವು ಖರೀದಿ ಮಾಡಬೇಕು ಹಾಗೂ ತಕ್ಷಣವೇ ಕನಿಷ್ಠ ಬೆಂಬಲ ಬೆಲೆ ಘೊಷಣೆ ಮಾಡಬೇಕು ಎಂದು ಕುಮಾರಸ್ವಾಮಿ ಕೃಷಿ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಮಾವು ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಬೆಲೆ ಸಿಗದ ಕಾರಣಕ್ಕೆ ಮಾವನ್ನು ರಸ್ತೆಗೆ ಸುರಿಯುತ್ತಿದ್ದಾರೆ. ಇಂಥ ಕಷ್ಟಕಾಲದಲ್ಲಿ ತಾವು ರೈತರ ನೆರವಿಗೆ ಧಾವಿಸಬೇಕು ಎಂದು ಕುಮಾರಸ್ವಾಮಿ ಕೋರಿದ್ದರು.

ಸದ್ಯಕ್ಕೆ ಕೇಂದ್ರ ಸರಕಾರ ನೆರವಿಗೆ ಬಾರದಿದ್ದರೆ ಬೆಳೆಗಾರರಿಗೆ ಬೇರೆ ನೆರವಿನ ಖಾತರಿ ಇಲ್ಲ. ಕೂಡಲೇ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ನಫೆಡ್ ಮತ್ತು ಎನ್ಸಿಸಿಎಫ್ ಮೂಲಕ ಕೂಡಲೇ ಮಾವು ಖರೀದಿ ಆರಂಭಿಸಬೇಕು, ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಅವರು ವಿನಂತಿ ಮಾಡಿದ್ದರು.

ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಮಾವನ್ನು ರಾಜ್ಯದಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, ಹೆಚ್ಚಾಗಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ.

ರಬಿ ಋತುವಿನಲ್ಲಿ ಅಂದಾಜು 8ರಿಂದ 10 ಲಕ್ಷ ಟನ್ ಮಾವು ಈ ಜಿಲ್ಲೆಗಳಲ್ಲಿ ಬೆಳೆಯಲ್ಪಡುತ್ತದೆ. ದುರದೃಷ್ಟದ ಸಂಗತಿ ಎಂದರೆ, ಹವಾಮಾನ ವೈಪರೀತ್ಯದಿಂದ ರೋಗರುಜಿನ ತಗುಲಿ ಪ್ರಸಕ್ತ ವರ್ಷದಲ್ಲಿ ಮಾವಿನ ಇಳುವರಿ ಶೇ.30ರಷ್ಟು ಕಡಿಮೆಯಾಗಿದೆ ಎಂದ ಅಂಶವನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments