ರಾಷ್ಟ್ರಪತಿ ದ್ರೌಪದಿ ಮರ್ಮು 6 ನೂತನ ರಾಜ್ಯಪಾಲರ ನೇಮಕ ಹಾಗೂ ಮೂವರು ರಾಜ್ಯಪಾಲರನ್ನು ಬದಲಿಸಿ ಆದೇಶ ಹೊರಡಿಸಿದ್ದಾರೆ.
ಅಸ್ಸಾಂ, ಪಂಜಾಬ್, ತೆಲಂಗಾಣ, ಚಂಡೀಗಢ, ಸಿಕ್ಕಿಂ, ಜಾರ್ಖಂಡ್, ಪುರುಚೇರಿ, ರಾಜಸ್ಥಾನ್ ಗೆ ರಾಜ್ಯಪಾಲರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಮೈಸೂರಿನ ಮಾಜಿ ಲೋಕಸಭಾ ಸದಸ್ಯ ಸಿಎಚ್ ವಿಜಯ ಶಂಕರ್ ಅವರನ್ನು ಮೇಘಾಲಯ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ವಿಜಯಶಂಕರ್ 2019ರಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದರು.
ಅಸ್ಸಾಂ ರಾಜ್ಯಪಾಲರಾಗಿ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ನೇಮಕ ಮಾಡಲಾಗಿದ್ದು, ಅವರಿಗೆ ಹೆಚ್ಚುವರಿಯಾಗಿ ಮಣಿಪುರದ ಜವಾಬ್ದಾರಿ ವಹಿಸಲಾಗಿದೆ.
ಪಂಜಾಬ್ ರಾಜ್ಯಪಾಲ ಸ್ಥಾನಕ್ಕೆ ಬನ್ವರಿಲಾಲ್ ಪುರೋಹಿತ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಗುಲಾಬ್ ಚಾಂದ್ ಕಟಾರಿಯಾ ಅವರನ್ನು ನೇಮಿಸಲಾಗಿದೆ. ಸಿಕ್ಕಿಂ ರಾಜ್ಯಪಾಲರಾಗಿದ್ದ ಕಟಾರಿಯಾ ಅವರಿಗೆ ಹೆಚ್ಚುವರಿಯಾಗಿ ಮಣಿಪುರ ರಾಜ್ಯದ ಹೊಣೆ ಹೊರಿಸಲಾಗಿದೆ.
ಸಿಕ್ಕಿಂ ರಾಜ್ಯಪಾಲರಾಗಿ ಬಿಜೆಪಿ ಹಿರಿಯ ನಾಯಕ ಓಂ ಪ್ರಕಾಶ್ ಮಾಥುರ್ ಅವರನ್ನು ನೇಮಿಸಲಾಗಿದೆ. ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಕೃಷ್ಣನ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದ್ದ ತೆಲಂಗಾಣದ ರಾಜ್ಯಪಾಲ ಹುದ್ದೆಯನ್ನು ಬದಲಿಸಿ ಮಹಾರಾಷ್ಟ್ರಕ್ಕೆ ಸ್ಥಳಾಂತರಿಸಲಾಗಿದೆ.