Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ದೇಶ

ಏಪ್ರಿಲ್ 1ರಿಂದ ಬ್ಯಾಂಕಿಂಗ್ ನಿಯಮದಲ್ಲಿ ಬದಲಾವಣೆ: ಎಟಿಎಂ ಹಣ ವಿತ್ ಡ್ರಾ ಶುಲ್ಕ ಹೆಚ್ಚಳ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
atm withdrawal

2025ರ ಏಪ್ರಿಲ್ 1ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ ಬರುತ್ತಿವೆ. ಎಟಿಎಂ ಹಣ ಹಿಂಪಡೆಯಲು ಹೆಚ್ಚುವರಿ ಶುಲ್ಕದಿಂದ (ATM transaction fee) ಹಿಡಿದು ಕೆಲ ಬ್ಯಾಂಕುಗಳ ಕ್ರೆಡಿಟ್ ಕಾರ್ಡ್ ನಿಯಮಗಳವರೆಗೆ ಬದಲಾವಣೆಗಳಾಗುತ್ತಿವೆ.

ಇದರಲ್ಲಿ ಪ್ರಮುಖವಾಗಿ ಎರಡು ಅಂಶಗಳು ಗಮನಾರ್ಹ ಎನಿಸಿವೆ. ಮೊದಲನೆಯದು ಎಟಿಎಂಗಳಲ್ಲಿ ಕಾರ್ಡ್ ಬಳಸಿ ಹಣ ವಿತ್​​ಡ್ರಾ ಮಾಡಿದಾಗ ವಿಧಿಸಲಾಗುವ ಶುಲ್ಕದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಹಾಗೆಯೇ, ಕೆಲ ಬ್ಯಾಂಕುಗಳ ಅಕೌಂಟ್​​ಗಳಲ್ಲಿ ಕನಿಷ್ಠ ಹಣ ಎಷ್ಟು ಹೊಂದಿರಬೇಕು ಎನ್ನುವ ನಿಯಮವನ್ನು ಪರಿಷ್ಕರಿಸುತ್ತಿವೆ. ಈ ಬಗ್ಗೆ ಮಾಹಿತಿ ಇಲ್ಲಿದೆ

ಬಹುತೇಕ ಎಲ್ಲಾ ಬ್ಯಾಂಕುಗಳು ಇಂಟರ್​​ಚೇಂಜ್ ಶುಲ್ಕಗಳನ್ನು ಹೆಚ್ಚಿಸಿವೆ. ಎಟಿಎಂಗಳಲ್ಲಿ ಅನುಮತಿಸಿದ ಮಿತಿಗಿಂತ ಹೆಚ್ಚು ಬಾರಿ ಹಣ ವಿತ್​​ಡ್ರಾ ಮಾಡಿದರೆ ಶುಲ್ಕ ಕಟ್ಟಬೇಕಾಗುತ್ತದೆ. ಈ ಶುಲ್ಕದ ದರವನ್ನು ಹೆಚ್ಚಿಸಲಾಗಿದೆ.

ಮೇ 1ರಿಂದ ಈ ನಿಯಮ ಜಾರಿಗೆ ಬರಲಿದೆ. ನಿಮ್ಮ ಬ್ಯಾಂಕ್​ನದ್ದಲ್ಲದ ಎಟಿಎಂಗಳಲ್ಲಿ ನೀವು ತಿಂಗಳಿಗೆ 3ರಿಂದ 5 ವಹಿವಾಟುಗಳನ್ನು ಮಾಡಬಹುದು. ಹಣ ವಿತ್​​ಡ್ರಾ ಆಗಬಹುದು ಅಥವಾ ಬೇರೆ ಟ್ರಾನ್ಸಾಕ್ಷನ್ ಕೂಡ ಆಗಿರಬಹುದು. ಈ ನಿಗದಿತ ಮಿತಿಯನ್ನು ಮೀರಿದರೆ ಆಗ ಪ್ರತೀ ಹೆಚ್ಚುವರಿ ಟ್ರಾನ್ಸಾಕ್ಷನ್​ಗೂ ನಿರ್ದಿಷ್ಟ ಶುಲ್ಕ ಇರುತ್ತದೆ. ಮೇ 1ರಿಂದ ಈ ಶುಲ್ಕದಲ್ಲಿ 1-2 ರೂ ಹೆಚ್ಚಳ ಮಾಡಲಾಗುತ್ತಿದೆ.

ಕ್ಯಾಷ್ ವಿತ್​ಡ್ರಾ ಮಾಡಿದರೆ ವಿಧಿಸುವ ಶುಲ್ಕವನ್ನು 17 ರೂನಿಂದ 19 ರೂಗೆ ಹೆಚ್ಚಿಸಲಾಗುತ್ತಿದೆ. ಅಕೌಂಟ್ ಬ್ಯಾಲನ್ಸ್ ಪರಿಶೀಲನೆ ಸೇರಿದಂತೆ ನಾನ್-ಟ್ರಾನ್ಸಾಕ್ಷನ್ ಶುಲ್ಕ 6 ರೂ ಇದ್ದದ್ದು 7 ರೂ ಆಗುತ್ತದೆ. ಮಿನಿಮಮ್ ಬ್ಯಾಲನ್ಸ್ ಶುಲ್ಕ ಎಸ್​​ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕೆನರಾ ಬ್ಯಾಂಕ್ ಮೊದಲಾದ ಪ್ರಮುಖ ಬ್ಯಾಂಕುಗಳು ತಮ್ಮ ಮಿನಿಮಮ್ ಬ್ಯಾಲನ್ಸ್ ನಿಯಮಗಳನ್ನು ಪರಿಷ್ಕರಿಸುತ್ತಿವೆ.

ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬೇರೆ ಬೇರೆ ಮಿನಿಮಮ್ ಬ್ಯಾಲನ್ಸ್ ನಿಯಮಗಳನ್ನು ಅಳವಡಿಸಲಾಗುತ್ತಿದೆ. ಸೇವಿಂಗ್ಸ್ ಅಕೌಂಟ್​ಗಳಿಗೆ ಬಡ್ಡಿ ಸೇವಿಂಗ್ಸ್ ಬ್ಯಾಂಕ್ ಅಕೌಂಟ್​​​ಗಳಲ್ಲಿ ನೀವೆಷ್ಟೇ ಹಣ ಬ್ಯಾಲನ್ಸ್ ಇಟ್ಟಿದ್ದರೂ ಬಡ್ಡಿದರ ಫ್ಲ್ಯಾಟ್ ಇರುತ್ತದೆ. 1,000 ರೂ ಇದ್ದವರಿಗೂ ಶೇ. 4, ಒಂದು ಲಕ್ಷ ಹಣ ಇಟ್ಟವರಿಗೂ ಶೇ. 4 ಬಡ್ಡಿ ಮಾತ್ರವೇ ಸಿಗುತ್ತದೆ. ಈಗ ಬ್ಯಾಂಕುಗಳು ಈ ನಿಯಮ ಬದಲಾವಣೆ ಮಾಡುತ್ತಿವೆ. ಅಕೌಂಟ್​​​ಗಳಲ್ಲಿ ಹೆಚ್ಚು ಹಣ ಇದ್ದರೆ ಹೆಚ್ಚು ಬಡ್ಡಿದರ, ಕಡಿಮೆ ಹಣ ಇದ್ದರೆ ಕಡಿಮೆ ಬಡ್ಡಿದರ ನಿಗದಿ ಮಾಡಲಾಗುತ್ತಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment