Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ದೇಶ

ಯುಪಿಯ ಸಂಭಾಲ್ ನಲ್ಲಿ ಹಿಂಸಾಚಾರ: ಸಮಾಜವಾದಿ ಸಂಸದ ಸೇರಿ 400 ಮಂದಿ ವಿರುದ್ಧ ಚಾರ್ಜ್ ಶೀಟ್ !

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
sambhal

ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಭಾನುವಾರ ಮಸೀದಿ ಸಮೀಕ್ಷೆಗೆ ತಡೆಯೊಡ್ಡಿ ನಡೆದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಸಮಾಜವಾದಿ ಸಂಸದ ಸೇರಿ 400 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಸಂಭಾಲ್ ಪೊಲೀಸರು ಇದುವರಗೆ 25 ಮಂದಿಯನ್ನು ಬಂಧಿಸಿದ್ದು, 7 ಪ್ರಕರಣಗಳಲ್ಲಿ 400 ಮಂದಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ.

ಸಂಭಾಲ್ ಕ್ಷೇತ್ರದ ಸಮಾಜವಾದಿ ಪಕ್ಷದ ಸಂಸದ  ಜಿಯುರ್ ರೆಹಮಾನ್ ಬರ್ಕ್, ಪಕ್ಷದ ಮುಖಂಡ ಇಕ್ಬಾಲ್ ಮೆಹಮೂದ್ ಪುತ್ರ ನವಾಬ್ ಇಕ್ಬಾಲ್ ಸುಹೇಲ್ ಸೇರಿದಂತೆ ಹಲವು ಪ್ರಮುಖರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಂಭಾಲ್ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇಂಟರ್ನೆಟ್ ಸೇವೆಯನ್ನು ರದ್ದುಗೊಳಿಸಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮೊಘಲ್ ಕಾಲದಲ್ಲಿ ಹಿಂದೂ ದೇವಸ್ಥಾನ ಕೆಡವಿ ಆ ಜಾಗದಲ್ಲಿ ಜಮಾ ಮಸೀದಿ ನಿರ್ಮಿಸಲಾಗಿದೆ ಎಂಬ ಪ್ರಕರಣದ ಕುರಿತು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಸ್ಥಳದ ಮಹಜರು ಹಾಗೂ ಸರ್ವೆ ನಡೆಸುವಂತೆ ಸೂಚಿಸಿತ್ತು.

ಸರ್ವೆ ನಡೆಸಲು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದಾಗ ಸ್ಥಳೀಯರು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿದ್ದು, ಎರಡು ಕೋಮುಗಳ ನಾಲ್ವರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು. ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment