Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ಕ್ರೀಡೆ

ಪ್ರಿಯಾಂಶ್ ಸಿಡಿಲಬ್ಬರದ ಶತಕಕ್ಕೆ ಮಣಿದ ಚೆನ್ನೈ ಸೂಪರ್ ಕಿಂಗ್ಸ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 2 ವೀಕ್ಷಣೆಗಳು
priyansh arya

ಪ್ರಿಯಾಂಶ್ ಆರ್ಯಾ ಚೊಚ್ಚಲ ಶತಕದ ಸಹಾಯದಿಂದ ಪಂಜಾಬ್ ಕಿಂಗ್ಸ್ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 18 ರನ್ ಗಳ ರೋಚಕ ಜಯ ಸಾಧಿಸಿದೆ.

ಮೊಹಾಲಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್ ಪೇರಿಸಿತು. ಕಠಿಣ ಗುರಿ ಬೆಂಬತ್ತಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 201 ರನ್ ಗಳಿಸಲಷ್ಟೇ ಶಕ್ತವಾಯಿತು.

ಪಂಜಾಬ್ ಆಡಿದ 4 ಪಂದ್ಯಗಳಿಂದ 3 ಜಯ ಹಾಗೂ 1 ಸೋಲಿನೊಂದಿಗೆ 6 ಅಂಕ ಸಂಪಾದಿಸಿ 4ನೇ ಸ್ಥಾನಕ್ಕೇರಿದರೆ, ಚೆನ್ನೈ ಸೂಪರ್ ಕಿಂಗ್ಸ್ 4 ಪಂದ್ಯಗಳಿಂದ 1 ಜಯ ಹಾಗೂ 3 ಸೋಲಿನೊಂದಿಗೆ 2 ಅಂಕದೊಂದಿಗೆ 9ನೇ ಸ್ಥಾನಕ್ಕೆ ಕುಸಿದಿದೆ.

ಕಠಿಣ ಗುರಿ ಬೆಂಬತ್ತಿದ ಚೆನ್ನೈ ತಂಡಕ್ಕೆ ರಚಿನ್ ರವೀಂದ್ರ ಮತ್ತು ಡೆವೊನ್ ಕಾನ್ವೆ ಮೊದಲ ವಿಕೆಟ್ ಗೆ 61 ರನ್ ಜೊತೆಯಾಟದಿಂದ ಉತ್ತಮ ಆರಂಭ ನೀಡಿದರು. ರಚಿನ್ ರವೀಂದ್ರ 36 ರನ್ ಗಳಿಸಿದ್ದಾಗ ಮ್ಯಾಕ್ಸ್ ವೆಲ್ ಎಸೆತದಲ್ಲಿ ಸ್ಟಂಪ್ ಔಟಾಗಿ ನಿರ್ಗಮಿಸಿದರು.

ನಂತರ ಬಂದ ನಾಯಕ ಋತುರಾಜ್ ಗಾಯಕ್ವಾಡ್ (1) ವಿಫಲರಾದರು. ಶಿವಂ ದುಬೆ ಮತ್ತು ಕಾನ್ವೆ 3ನೇ ವಿಕೆಟ್ ಗೆ 91 ರನ್ ಜೊತೆಯಾಟದಿಂದ ತಂಡವನ್ನು ಆಧರಿಸಿದರು. ದುಬೆ 27 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 42 ರನ್ ಗಳಿಸಿ ಔಟಾದರೆ, ಕಾನ್ವೆ 49 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 69 ರನ್ ಸಿಡಿಸಿದ್ದಾಗ ರಿಟೈರ್ಡ್ ಘೋಷಿಸಿ ಮೈದಾನ ತೊರೆದರು.

5ನೇ ಕ್ರಮಾಂಕದಲ್ಲಿ ಆಡಲು ಬಂದ ಧೋನಿ 12 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್ ಸಿಡಿಸಿ 27 ರನ್ ಗಳಿಸಿದರೂ ತಂಡವನ್ನು ಗೆಲ್ಲಿಸಿ ಮತ್ತೆ ಹೀರೋ ಆಗುವ ಪ್ರಯತ್ನದಲ್ಲಿ ವಿಫಲರಾದರು. ಕೊನೆಯಲ್ಲಿ ರವೀಂದ್ರ ಜಡೇಜಾ 1 ಸಿಕ್ಸರ್ ನೊಂದಿಗೆ 9 ಹೊಡೆದರೂ ಸಾಕಾಗಲಿಲ್ಲ. ಪಂಜಾಬ್ ಪರ ಲೂಕಿ ಫರ್ಗೂಸನ್ 2 ವಿಕೆಟ್ ಪಡೆದರು.

ಪ್ರಿಯಾಂಶ್ ಚೊಚ್ಚಲ ಶತಕ

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಪಂಜಾಬ್ ತಂಡ ಪ್ರಿಯಾಂಶ್ ಆರ್ಯಾ 39 ಎಸೆತಗಳಲ್ಲಿ ಟೂರ್ನಿಯ ಮೊದಲ ಶತಕ ಸಿಡಿಸಿ ತಂಡ ಬೃಹತ್ ಮೊತ್ತ ಪೇರಿಸಲು ನೆರವಾದರು.

ಪಂಜಾಬ್ ಆರಂಭದಲ್ಲೇ ನಾಯಕ ಶ್ರೇಯಸ್ ಅಯ್ಯರ್ ಸೇರಿದಂತೆ ಪ್ರಮುಖ ಐವರು ಬ್ಯಾಟ್ಸ್ ಮನ್ ಗಳನ್ನು 83 ರನ್ ಗೆ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಗೆ ಒಳಗಾಗಿತ್ತು.

ಪ್ರಿಯಾಂಶ್ ಆರ್ಯಾ 39 ಎಸೆತಗಳಲ್ಲಿ ಶತಕ ಪೂರೈಸಿ ಅತ್ಯಂತ ವೇಗವಾಗಿ ಶತಕ ಸಿಡಿಸಿದ ದಾಖಲೆ ಬರೆದರು. ಆರ್ಯಾ 42 ಎಸೆತಗಳಲ್ಲಿ 7 ಬೌಂಡರಿ ಮತ್ತು 9 ಸಿಕ್ಸರ್ ನೊಂದಿಗೆ 103 ರನ್ ಬಾರಿಸಿ ಔಟಾದರು.

ಕೊನೆಯಲ್ಲಿ ಶಶಾಂಕ್ ಮತ್ತು ಮಾರ್ಕೊ ಜಾನ್ಸನ್ 65 ರನ್ ಜೊತೆಯಾಟದಿಂದ ತಂಡ ಮೊತ್ತವನ್ನು 200ರ ಗಡಿ ದಾಟಿಸಿದರು. ಶಶಾಂಕ್ 36 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ ಸೇರಿದಂತೆ 52 ರನ್ ಬಾರಿಸಿ ಔಟಾಗದೇ ಉಳಿದರೆ, ಜಾನ್ಸನ್ 19 ಎಸೆತಗಳಲ್ಲಿ ತಲಾ 2 ಬೌಂಡರಿ ಮತ್ತು 2 ಸಿಕ್ಸರ್ ಸೇರಿ 34 ರನ್ ಬಾರಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment