Wednesday, May 20, 2026
Google search engine
Homeದೇಶತಮಿಳುನಾಡಿನ ಆಸ್ಪತ್ರೆಯಲ್ಲಿ ಅಗ್ನಿ ದುರಂತ: ಮಗು ಸೇರಿ 6 ಮಂದಿ ದುರ್ಮರಣ

ತಮಿಳುನಾಡಿನ ಆಸ್ಪತ್ರೆಯಲ್ಲಿ ಅಗ್ನಿ ದುರಂತ: ಮಗು ಸೇರಿ 6 ಮಂದಿ ದುರ್ಮರಣ

ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಗು ಸೇರಿ ಕನಿಷ್ಠ 6 ಮಂದಿ ಮೃತಪಟ್ಟ ದಾರುಣ ಘಟನೆ ತಮಿಳುನಾಡಿ ದಿಂಡಗಲ್‌ ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.

ತಿರುಚ್ಚಿ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ವೈದ್ಯಕೀಯ ಉಪಕರಣ ಇರುವ ಜಾಗದಲ್ಲಿ ಎಲೆಕ್ಟ್ರಿಕ್‌ ಶಾರ್ಟ್‌ ಸರ್ಕ್ಯೂಟ್‌ ನಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.

ಆಸ್ಪತ್ರೆಯ ಕಟ್ಟಡದಲ್ಲಿ ಬೆಂಕಿ ಆವರಿಸಿಕೊಂಡಿದ್ದು, ಹಲವರನ್ನು ರಕ್ಷಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಸುಮಾರು 2 ಗಂಟೆ ತೆಗೆದುಕೊಂಡಿದ್ದಾರೆ.

ಮಗು ಸೇರಿದಂತೆ 6 ಮಂದಿ ಲಿಫ್ಟ್‌ ನಲ್ಲಿ ಸಿಲುಕಿಕೊಂಡಿದ್ದು, ಇವರು ಅಸ್ವಸ್ಥರಾಗಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments