ಯೂನಿರ್ವಸಲ್ ಬಾಸ್ ಎಂದೇ ಖ್ಯಾತರಾದ ವೆಸ್ಟ್ ಇಂಡೀಸ್ ಬ್ಯಾಟಿಂಗ್ ದೈತ್ಯ ಕ್ರಿಸ್ ಗೇಲ್ ಐಪಿಎಲ್ ನಲ್ಲಿ ಮಾಡಿದ ಸಿಕ್ಸರ್ ಗಳ ದಾಖಲೆಯಲ್ಲಿ 15 ವರ್ಷದ ಬಾಲಕ ವೈಭವ್ ಸೂರ್ಯವಂಶಿ ಮುರಿದಿದ್ದಾರೆ.
ಐಪಿಎಲ್ ನ ಒಂದೇ ಆವೃತ್ತಿಯಲ್ಲಿ 59 ಸಿಕ್ಸರ್ ಗಳನ್ನು ಸಿಡಿಸಿದ್ದ ಕ್ರಿಸ್ ಗೇಲ್ ದಾಖಲೆಯನ್ನು ವೈಭವ್ ಸೂರ್ಯವಂಶಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪ್ಲೇಆಫ್ ಪಂದ್ಯದಲ್ಲಿ ಮುರಿದಿದ್ದಾರೆ.
ಲಕ್ನೋ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 12 ಸಿಕ್ಸರ್ ಸಿಡಿಸಿ ಐಪಿಎಲ್ ನ ಒಂದೇ ಆವೃತ್ತಿಯಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಬರೆದರು.
ವೈಭವ್ ಸೂರ್ಯವಂಶಿ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಅತೀ ವೇಗದ ಫಿಫ್ಟಿ ದಾಖಲೆ ಸರಿಗಟ್ಟಿದರು. ಅಲ್ಲದೇ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 12 ಸಿಕ್ಸರ್ ಸಹಾಯದಿಂದ 97 ರನ್ ಗಳಿಸಿದ್ದಾಗ ಔಟಾಗಿ ಕೇವಲ 3 ರನ್ ಗಳಿಂದ ಶತಕ ವಂಚಿತರಾದರು. ಆದರೆ ವೈಭವ್ ಆರ್ಭಟದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ 5 ವಿಕೆಟ್ ಕಳೆದುಕೊಂಡು 240 ರನ್ ಗಳ ಬೃಹತ್ ಮೊತ್ತ ಪೇರಿಸಿತು.



