ಎನ್ ಸಿಪಿ ಪಕ್ಷದಿಂದ ಹೊರಬಂದು ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪತ್ನಿಗೆ 25 ಸಾವಿರ ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಕ್ಲೀನ್ ಚಿಟ್ ದೊರೆತಿದೆ.
ಎಕನಾಮಿಕ್ ಅಫೆನ್ಸ್ ಡಿಪಾರ್ಟ್ ಮೆಂಟ್ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಮೇಲಿದ್ದ 25 ಸಾವಿರ ಕೋಟಿ ರೂ. ಹಗರಣದಿಂದ ಕ್ಲೀನ್ ಚಿಟ್ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಪವಾರ್ ಕುಟುಂಬ ಭ್ರಷ್ಟ ಕುಟುಂಬ ಎಂದು ಆರೋಪಿಸಿದ್ದರು. ಆದರೆ ಈಗ ಮಹಾರಾಷ್ಟ್ರ ಸರ್ಕಾರದಲ್ಲಿ ಬಿಜೆಪಿ ಮೈತ್ರಿ ಪಕ್ಷಕ್ಕೆ ಬೆಂಬಲ ಘೋಷಿಸಿದ ಅಜಿತ್ ಪವಾರ್ ಕುಟುಂಬದ ಮೇಲಿನ ಬೃಹತ್ ಹಗರಣದಿಂದ ಕ್ಲೀನ್ ಚಿಟ್ ನೀಡಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಆರೋಪಿಸಿದೆ.