Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್, ದೀಪಾ ಬಾಸ್ತಿಗೆ 10 ಲಕ್ಷ ಪುರಸ್ಕಾರ ಘೋಷಿಸಿದ ಸಿಎಂ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
banu mushtaq, deepa basti

ಬೆಂಗಳೂರು: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಸನ್ಮಾನಿಸಿ ಮಾತನಾಡಿದರು.

ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ‌ ಎಂದು ಮೆಚ್ಚುಗೆ ಸೂಚಿಸಿದರು.

ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು. ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು ಎಂದು ಘೋಷಿಸಿದರು.

ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ವಿಶ್ಲೇಷಿಸಿದರು.

ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಡ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ.

ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡುಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment