Sunday, 8 November 2026 — Kannadavahini
BREAKING NEWS
ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ
ಬೆಂಗಳೂರು

ಶಕ್ತಿ ಯೋಜನೆಯ 500ನೇ ಕೋಟಿಯ ಟಿಕೆಟ್ ವಿತರಿಸಿದ ಸಿಎಂ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ಜಾರಿಗೆ ತಂದ ಮಹಿಳೆಯರಿಗೆ ಉಚಿತ ಪ್ರಯಾಣ 500 ಕೋಟಿ ತಲುಪಿದ್ದು, ಸೋಮವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ 500 ಕೋಟಿಯ ಟಿಕೆಟ್ ವಿತರಿಸಿದರು.

ಮಹಿಳಾ ಪ್ರಯಾಣಿಕರ ಪ್ರಯಾಣ ಸಂಖ್ಯೆ 500 ಕೋಟಿ ತಲುಪಿದ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಬಿಎಂಟಿಸಿ ಬಸ್ ಏರಿ ಸಿಎಂ ಟಿಕೆಟ್ ವಿತರಿಸಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಉಪಸ್ಥಿತರಿದ್ದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ  ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು.

ಸಿಗಂದೂರು ಕಾರ್ಯಕ್ರಮ-ಶಿಷ್ಠಾಚಾರ ಪಾಲನೆಯಾಗಿಲ್ಲ:

ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ. ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು.

ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು  ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ.  ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8407 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment