Monday, June 15, 2026
Google search engine
Homeರಾಜ್ಯಬರ ಎದುರಿಸಲು ತುರ್ತು ಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

ಬರ ಎದುರಿಸಲು ತುರ್ತು ಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದ್ದು, ತುರ್ತು ಕ್ರಮಗಳ ಪೂರ್ವ ಸಿದ್ಧತೆ ಆರಂಭಿಸುವಂತೆ ಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೋಮವಾರ ನಡೆದ ಕೃಷಿ, ತೋಟಗಾರಿಕೆ, ರೇಷ್ಮೆ ಮೀನುಗಾರಿಕೆ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಬಿತ್ತನೆ ಬೀಜ, ರೈತರಿಗೆ ಅಗತ್ಯ ಮಾಹಿತಿ ನೀಡಿ ರಸಗೊಬ್ಬರ ಸಮರ್ಪಕ ಪೂರೈಕೆ ಖಾತರಿಪಡಿಸಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇತರೆ ರಾಜ್ಯಗಳಲ್ಲಿರುವ ಮಾದರಿ ಯೋಜನೆ, ಮಾರ್ಗಗಳನ್ನು ಅಧ್ಯಯನ ಮಾಡಿ ರಾಜ್ಯದ ಕೃಷಿ ಸಂಸ್ಕೃತಿ ಮತ್ತು ಬೆಳೆ ಮಾದರಿಗಳಿಗೆ ಅನುಗುಣವಾಗಿ ಕಾರ್ಯರೂಪಕ್ಕೆ ತರಬೇಕು. ಡ್ರೋಣ್, ಎಐ ಮತ್ತಿತರ ಆಧುನಿಕ ತಂತ್ರಜ್ಞಾನವನ್ನು ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು. ಪ್ರಕೃತಿ ವೈಪರೀತ್ಯಗಳಿಂದ ರೈತರ ಕೃಷಿ ಚಟುವಟಿಕೆಗೆ ತೊಂದರೆ ಆಗದಂತೆ ಕ್ರಮ ವಹಿಸಿ ಎಂದು ಅವರು ಸೂಚಿಸಿದರು.

ರೈತರಿಗೆ ಕ್ರಿಮಿನಾಶಕ ಮತ್ತಿತರ ಔಷಧ ಸಿಂಪರಣೆ ಸಲಕರಣೆಗಳ ನೆರವನ್ನು ರೈತರಿಗೆ ಒದಗಿಸಬೇಕು.  ಪ್ರಾಥಮಿಕ ಕೃಷಿ ಜತೆ ಸೆಕೆಂಡರಿ ಕೃಷಿ  ಸೇರಿದಂತೆ ರೈತರ ಆದಾಯ ಹೆಚ್ಚಿಸಲು ಈಗಾಗಲೇ ಸೂಚಿಸಿರುವ ಕ್ರಮಗಳನ್ನು ಸಮರ್ಪಕವಾಗಿ ಜಾರಿ ಮಾಡಿ ಎಂದು ಅವರು ಹೇಳಿದರು.

ಕೃಷಿ ಇಲಾಖೆ ಅಧೀನದಲ್ಲಿರುವ ಐದು ನಿಗಮ ಮತ್ತು ಮಂಡಳಿಗಳ ಸ್ಥಿತಿಗತಿಯ ಅಧ್ಯಯನ‌ ನಡೆಸಿ ವರದಿ ನೀಡಿ. ಕೃಷಿ ಹೊಂಡಗಳಿಗೆ ಬಿದ್ದು ಸಾವನ್ನಪ್ಪುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಂಡಗಳಿಗೆ ಬೇಲಿ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಿ. ಇದಕ್ಕೆ ಹಣಕಾಸಿನ ನೆರವು ಸಂಬಂಧ ಅಗತ್ಯ ಯೋಜನೆ ರೂಪಿಸಿ, ಚರ್ಚಿಸಿ ಎಂದು ಅವರು ಸಲಹೆ ನೀಡಿದರು.

ರೈತರಿಗೆ ಸಬ್ಸಿಡಿ ದರದಲ್ಲಿ ಕೊಟ್ಟಿರುವ ಸವಲತ್ತುಗಳು ಎಷ್ಟು ಪ್ರಯೋಜನಕಾರಿಯಾಗಿವೆ ಎನ್ನುವ ಬಗ್ಗೆ ಪರಿಶೀಲನೆ ನಡೆಸಬೇಕು. ಸಬ್ಸಿಡಿ ನೀಡಿರುವ ಉದ್ದೇಶ ಜಾರಿ ಆಗುತ್ತಿದೆಯೇ ಎಂಬುದರ ಬಗ್ಗೆ ವರದಿ ನೀಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದರು.

ರೈತರಿಗೆ ವಂಚನೆ ಆಗಲು ಬಿಡಬಾರದು. 5 ಲಕ್ಷದವರೆಗೂ ಬಡ್ಡಿ ರಹಿತ ಸಾಲ ಸೌಲಭ್ಯ ದುರುಪಯೋಗ ಆಗುತ್ತಿರುವ ಬಗ್ಗೆ ರೈತರು ನನ್ನ ಬಳಿ ಬಂದು ದೂರುತ್ತಿದ್ದಾರೆ. ಇದಕ್ಕೆ ಕಟ್ಟು ನಿಟ್ಟಿನ‌ ಬ್ರೇಕ್ ಹಾಕಬೇಕು. ಅಗತ್ಯ ಇರುವ ಫಲಾನುಭವಿಗಳಿಗೆ ಸಾಲ ಸವಲತ್ತು ತಲುಪುವಂತೆ ನೋಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು.

ಈ ವರ್ಷ 1068 ಕೋಟಿ ಮಾವು ಬೆಳೆ ನಾಶ ಆಗಿದೆ. ಈ ಪೈಕಿ 25% ಅಂದರೆ 229 ಕೋಟಿ ರೂ. ಪರಿಹಾರ ಕೊಡಬೇಕಿದೆ. ಕರ್ನಾಟಕ ಸರಕಾರ 114 ಕೋಟಿ ಹಾಗೂ ಕೇಂದ್ರ ಸರಕಾರ 115 ಕೋಟಿ ನಷ್ಟ ಪರಿಹಾರ ಭರಿಸಬೇಕಿದೆ. ಕಾನೂನು ಪ್ರಕಾರ ಮಾವು ಬೆಳೆಗಾರರಿಗೆ ನಷ್ಟ ಪರಿಹಾರ ಸಿಗುವಂತೆ ನೋಡಿಕೊಳ್ಳಿ ಎಪಿಎಂಸಿ ಆವರ್ತ ನಿಧಿ ಸದ್ಬಳಕೆ ಆಗುವಂತೆ ನೋಡಿಕೊಳ್ಳಿ ಎಂದು ಅವರು ಹೇಳಿದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments